ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ತಲೆಯ ಮೇಲೆ ಸಾಲದ ಹೊರೆ

- Advertisement -
- Advertisement -

Sidlaghatta : “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ತಲೆಯ ಮೇಲೆ ಸಾಲದ ಹೊರೆ ಹೊರಿಸಿದೆ. ಆದರೆ, ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಆರ್ಥಿಕತೆಯನ್ನು ಸುಧಾರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ನಿರೀಕ್ಷೆಯಿದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಬಿಜೆಪಿ ಸೇವಾಸೌಧ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಆರ್ಥಿಕ ನಿರ್ವಹಣೆ ಮತ್ತು ಗ್ಯಾರಂಟಿಗಳ ಬಗ್ಗೆ ಆತಂಕ

“ರೈತರು, ಮಹಿಳೆಯರು ಮತ್ತು ಯುವಕರಿಗೆ ಅನುಕೂಲವಾಗುವ ಗ್ಯಾರಂಟಿ ಯೋಜನೆಗಳಿಗೆ ನಮ್ಮ ವಿರೋಧವಿಲ್ಲ. ಆದರೆ, ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ, ಇದು ಜನಸಾಮಾನ್ಯರ ತಲಾ ಸಾಲದ ಪ್ರಮಾಣವನ್ನು ಹೆಚ್ಚಿಸಿದೆ. ಡಿ.ಕೆ. ಶಿವಕುಮಾರ್ ಅವರು ಪಂಚ ಗ್ಯಾರಂಟಿಗಳ ಜೊತೆಗೆ ಹೆಚ್ಚಿನ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಯೋಜನೆಗಳ ಲಾಭ ಅರ್ಹರಿಗೆ ಸಿಗಬೇಕು ಮತ್ತು ಅವರು ರಾಜ್ಯದ ಖಜಾನೆಯನ್ನು ತುಂಬುವತ್ತ ಗಮನ ಹರಿಸಬೇಕು” ಎಂದು ಹೇಳಿದರು.

ಕೈಗಾರಿಕಾ ಭೂಸ್ವಾಧೀನಕ್ಕೆ ವಿರೋಧ

ನಾವು ಕೈಗಾರಿಕೆಗಳ ವಿರೋಧಿಗಳಲ್ಲ, ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ (KIADB) ಮೂಲಕ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ. ರೈತರ ಒಪ್ಪಿಗೆಯಿಲ್ಲದೆ ಎ ಮತ್ತು ಬಿ ಗ್ರೇಡ್ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಾರದು. ಕೇವಲ ಸಿ ಮತ್ತು ಡಿ ಗ್ರೇಡ್ ಭೂಮಿಯನ್ನು ಮಾತ್ರ ಪರಿಗಣಿಸಬೇಕು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತರ ಧರಣಿ ಬಗ್ಗೆ ಸರ್ಕಾರದ ಮೌನ

ಜಿಲ್ಲಾಡಳಿತ ಭವನದ ಮುಂದೆ ರೈತರು ಕಳೆದ 81 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದು ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಟೀಕಿಸಿದರು.

‘ತಾಯಿಯ ಹೆಸರಲ್ಲಿ ಸಸಿ’ ಕಾರ್ಯಕ್ರಮ

ವಿಶ್ವ ಪರಿಸರ ದಿನದ ಅಂಗವಾಗಿ ಪಕ್ಷದ ನಿರ್ದೇಶನದಂತೆ ಬೂತ್ ಮಟ್ಟದ ಪದಾಧಿಕಾರಿಗಳು ತಮ್ಮ ತಾಯಿಯ ಹೆಸರಿನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಈ ಕಾರ್ಯಕ್ರಮದ ನಂತರ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಬೆಂಗಳೂರಿನ ‘ವಿಧಾನಸೌಧ ಚಲೋ’ಗೆ ತೆರಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ನಗರ ಘಟಕದ ಅಧ್ಯಕ್ಷ ದೇವರಾಜ್, ಮುಖಂಡರಾದ ಕಂಬದಹಳ್ಳಿ ಸುರೇಂದ್ರಗೌಡ, ನಾರಾಯಣಸ್ವಾಮಿ, ಬಂಗಾರು ರಾಮಕೃಷ್ಣ, ತಲದುಮ್ಮನಹಳ್ಳಿ ಮಧು, ಪುರುಷೋತ್ತಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!