ಕಾಂಗ್ರೆಸ್ ಸಂಘಟನ್ ಸೃಜನ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ “ಸಂಘಟನ್ ಸೃಜನ ಅಭಿಯಾನ” ಕಾರ್ಯಕ್ರಮವು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆಯಿತು. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಪಕ್ಷದ ಮುಖಂಡರು ಹಾಗೂ ವಿವಿಧ ಹುದ್ದೆ ನಿರ್ವಹಿಸಿರುವವರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಯಿತು. ಎಐಸಿಸಿ (AICC) ಉಸ್ತುವಾರಿ ಡಾ. ಪಲಕ್ ವರ್ಮ ಪಕ್ಷದ ಶಿಸ್ತಿನ ಬಗ್ಗೆ ಎಚ್ಚರಿಕೆ ನೀಡಿದರು.

ಬಿಗಿ ಬಂದೋಬಸ್ತ್ ಏಕೆ?

ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ ಇದೇ “ಸಂಘಟನ್ ಸೃಜನ ಅಭಿಯಾನ” ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮಾಜಿ ಶಾಸಕ ಡಾ. ಎಂ.ಸಿ. ಸುಧಾಕರ್ ಹಾಗೂ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ತಳ್ಳಾಟ, ನೂಕಾಟ ಹಾಗೂ ಹೊಡೆದಾಟವೂ ನಡೆದಿದ್ದ ಹಿನ್ನೆಲೆಯಲ್ಲಿ, ಭಾನುವಾರ ಶಿಡ್ಲಘಟ್ಟದಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿಯೂ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಶಿಡ್ಲಘಟ್ಟ ಕಾಂಗ್ರೆಸ್ ಮುಖಂಡರಾದ ರಾಜೀವ್ ಗೌಡ ಮತ್ತು ಪುಟ್ಟು ಆಂಜಿನಪ್ಪ ಅವರ ಬೆಂಬಲಿಗರ ನಡುವೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದರು. ಕಾಂಗ್ರೆಸ್ ಕಾರ್ಯಕರ್ತರಷ್ಟೇ ಸಂಖ್ಯೆಯಲ್ಲಿ ಪೊಲೀಸರು ಕಾರ್ಯಕ್ರಮದ ಸ್ಥಳದಲ್ಲಿ ಕಂಡುಬಂದರು.

ಡಾ. ಪಲಕ್ ವರ್ಮ ಏನು ಹೇಳಿದರು?

ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ (AICC) ಉಸ್ತುವಾರಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಜಂಟಿ ಕಾರ್ಯದರ್ಶಿ ಡಾ. ಪಲಕ್ ವರ್ಮ ಅವರು ಪಕ್ಷದ ಶಿಸ್ತಿನ ವಿಚಾರವನ್ನು ಪದೇ ಪದೇ ಪ್ರಸ್ತಾಪಿಸಿದರು. “ಕಾಂಗ್ರೆಸ್ ರಾಷ್ಟ್ರೀಯ ಹಾಗೂ ಐತಿಹಾಸಿಕ ಪಕ್ಷ. ಪಕ್ಷದಲ್ಲಿ ಅಶಿಸ್ತಿಗೆ ಯಾವುದೇ ಅವಕಾಶವಿಲ್ಲ. ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಈ ಕೆಳಗಿನವರು ಭಾಗವಹಿಸಿದ್ದರು:

  • ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕಾರ್ತಿಕ್
  • ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವ ರೆಡ್ಡಿ
  • ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ
  • ಕೋಚಿಮುಲ್ (KOCHIMUL) ಮಾಜಿ ಅಧ್ಯಕ್ಷ ಕೆ. ಗುಡಿಯಪ್ಪ
  • ಆರ್. ಶ್ರೀನಿವಾಸ್
  • ಹಾಪ್‌ ಕಾಮ್ಸ್ (HOPCOMS) ಅಧ್ಯಕ್ಷ ಚಂದ್ರಗೌಡ
  • ಮೇಲೂರು ಮುರಳಿ
  • ಗಂಜಿಗುಂಟೆ ಮೌಲಾ
  • ನಗರಸಭೆ ಮಾಜಿ ಅಧ್ಯಕ್ಷ ಅಫ್ಸರ್ ಪಾಷಾ

ಜಿಲ್ಲಾಧ್ಯಕ್ಷರ ಆಯ್ಕೆಗೆ ಹೇಗೆ ಅಭಿಪ್ರಾಯ ಸಂಗ್ರಹ?

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಭಾಗವಾಗಿ ಪಕ್ಷದ ಪ್ರಮುಖ ಮುಖಂಡರು ಹಾಗೂ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವವರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು, ನಗರಸಭೆ ಮಾಜಿ ಸದಸ್ಯರು ಮತ್ತು ಪಕ್ಷದ ಪ್ರಮುಖ ಮುಖಂಡರಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಕುರಿತು ಅಭಿಪ್ರಾಯ ಪಡೆಯಲಾಯಿತು. ಈ ಪ್ರಕ್ರಿಯೆ ವೇಳೆ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಪ್ರತ್ಯೇಕವಾಗಿ ದಾಖಲಿಸಿದರು. ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಸಮರ್ಥ ನಾಯಕತ್ವದ ಅಗತ್ಯದ ಬಗ್ಗೆಯೂ ಮುಖಂಡರು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು ಅವರು ಕಾರ್ಯಕ್ರಮ ಮುಗಿಯುವ ಮುನ್ನವೇ ತಮ್ಮ ಖಾಸಗಿ ಕಾರ್ಯಕ್ರಮವಿರುವುದಾಗಿ ತಿಳಿಸಿ ಸ್ಥಳದಿಂದ ತೆರಳಿದರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದ ಸುತ್ತಮುತ್ತಲೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು.

In English: A Congress “Sanghatan Srujana Abhiyan” programme at Sidlaghatta’s Congress Bhavan on Sunday was held under heavy police bandobast, as part of the process to select the new Chikkaballapura District Congress Committee (DCC) president. AICC in-charge Dr. Palak Varma warned party workers against indiscipline. The tight security followed a clash between supporters of former MLA Dr. M.C. Sudhakar and local Congress leader Rajeev Gowda at a similar event in Chikkaballapura last month, and ongoing differences between local leaders Rajeev Gowda and Anjinappa Puttu. Senior leaders including KPCC general secretary G.S. Karthik and DCC president Keshava Reddy attended, and individual opinions were separately collected from former zilla panchayat members, cooperative bank ex-office bearers, and party leaders on the new DCC president.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!