ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪನವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಅವರ ಅಭಿಮಾನಿಗಳು ಯಾರೂ ಆತಂಕ ಪಡುವುದು ಬೇಡ, ಮುಂದಿನ ಕೆಲವೇ ದಿನಗಳಲ್ಲಿ ಕ್ಷೇತ್ರದಲ್ಲಿ ಸಂಚರಿಸಿ ಜನಸೇವೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಮಧುಸೂದನ್ ಹೇಳಿದರು.
ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ ಹಾಗೂ ಶ್ರೀ ಸಾಯಿನಾಥ ಮಂದಿರದಲ್ಲಿ ಸೋಮವಾರ ವಿ.ಮುನಿಯಪ್ಪ ಅಭಿಮಾನಿಗಳ ಬಳಗ ಹಾಗೂ ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳಿಂದ ಶಾಸಕ ವಿ.ಮುನಿಯಪ್ಪ ಚೇತರಿಕೆಗಾಗಿ ಏರ್ಪಡಿಸಲಾಗಿದ್ದ ಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಳೆದ ಕೆಲ ದಿನಗಳ ಹಿಂದೆ ನಮ್ಮ ಜನಪ್ರಿಯ ಶಾಸಕ ವಿ.ಮುನಿಯಪ್ಪ ಅನಾರೋಗ್ಯಕ್ಕೆ ತುತ್ತಾಗಿದ್ದು ಇದೀಗ ಚೇತರಿಕೆ ಕಂಡಿದೆ. ವಯೋಸಹಜ ಕಾರಣದಿಂದ ಸ್ವಲ್ಪ ಸುಸ್ತು ಇರುವುದರಿಂದ ಮತ್ತೆರಡು ದಿನಗಳ ವಿಶ್ರಾಂತಿ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಶಾಸಕರು ಕ್ಷೇತ್ರದಾಧ್ಯಂತ ಸಂಚರಿಸಿ ಜನಸೇವೆ ಆರಂಬಿಸಲಿದ್ದಾರೆ, ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಅವರ ಅಭಿಮಾನಿಗಳು ಆತಂಕಗೊಳ್ಳುವುದು ಬೇಡ ಎಂದರು.
ಶಾಸಕ ವಿ.ಮುನಿಯಪ್ಪ ಬೇಗ ಗುಣಮುಖರಾಗಿ ಎಂದಿನಂತೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಸೇರಿದಂತೆ ಕಾರ್ಯಕರ್ತರು ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಪದಾಧಿಕಾರಿಗಳಾದ ಶ್ರೀನಾಥ್, ವಿ.ಮುನಿಯಪ್ಪ ಅಭಿಮಾನ ಬಳಗದ ಹಫೀಜ್‌ಪಾಷ, ಕೆ.ಎನ್.ಮುನೀಂದ್ರ, ನಿರಂಜನ್, ಮನೋಹರ್, ಸಾದಿಕ್, ಮಂಜುನಾಥ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







