ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ

- Advertisement -
- Advertisement -

Sidlaghatta : ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು ಕೂಡಲೆ ಅವರು ಮಹಿಳೆಯರಲ್ಲಿ ಕ್ಷಮೆ ಕೇಳಬೇಕು ಎಂದು ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ ನ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಸಚಿವರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಬಸ್ ನಿಲ್ದಾಣದ ಇಂದಿರಾ ಕ್ಯಾಂಟೀನ್‌ ನಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತೆಯರು, ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಭಿತ್ತಿಚಿತ್ರ ಪ್ರದರ್ಶಿಸಿ ಅವರ ವಿರುದ್ದ ದಿಕ್ಕಾರಗಳನ್ನು ಕೂಗಿದರು.

ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಈ ಹಿಂದೆ ತನ್ನ ಬೆಂಬಲಿಗ ಉಮೇಶ್ ಅವರೊಂದಿಗೆ ಮೊಬೈನಲ್ಲಿ ಮಾತನಾಡುವಾಗ ಮಹಿಳಾ ಅಧಿಕಾರಿಯನ್ನು ಅವಾಚ್ಯವಾಗಿ ನಿಂಧಿಸಿದ್ದು, ಅಧಿಕಾರಿ, ಶಾಸಕರು ಹಾಗೂ ಸಚಿವರ ಕಾರ್ಯಕ್ರಮವನ್ನು ಬಹಿಷ್ಕರಿಸಿ ಎಂದು ಪ್ರಚೋದಿಸಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿದ್ದು ಜಿಲ್ಲಾ ಕಾಂಗ್ರೆಸ್‌ ನಲ್ಲಿ ಸಂಚಲನ ಮೂಡಿಸಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಈ ವೇಳೆ ಕಾಂಗ್ರೆಸ್‌ ನ ಮಹಿಳಾ ಘಟಕದ ಉಪಾಧ್ಯಕ್ಷೆ ಗಾಯಿತ್ರಮ್ಮ ಮಾತನಾಡಿ, ಸಚಿವ ಸುಧಾಕರ್ ಅವರು ಇದೀಗ ಉನ್ನತ ಸ್ಥಾನದಲ್ಲಿದ್ದಾರೆ. ಈ ಹಿಂದೆ ಅವರು ಒಬ್ಬ ಮಹಿಳಾ ಅಧಿಕಾರಿ ಕುರಿತು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಮಾತನಾಡಿರುವ ಆಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇದು ಮಹಿಳೆಯರಿಗೆ ಮಾಡುವ ಅಪಮಾನ ಎಂದು ದೂರಿದರು.

ಕಾಂಗ್ರೆಸ್ ಪಕ್ಷವು ಎಂದಿಗೂ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ನೋಡುತ್ತದೆ. ಅಷ್ಟೇ ಗೌರವವನ್ನು ಕೂಡ ನೀಡುತ್ತದೆ. ಆದರೆ ಡಾ.ಎಂ.ಸಿ.ಸುಧಾಕರ್ ಅವರು ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು ನಮ್ಮೆಲ್ಲರಿಗೂ ಬೇಸರ ತಂದಿದೆ. ಕೂಡಲೆ ಅವರು ಮಹಿಳೆಯರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿ ಈ ಆಡಿಯೋದ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸುತ್ತೇವೆ ಮತ್ತು ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಚಿವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೂ ದೂರು ನೀಡುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ಗಾಯಿತ್ರಮ್ಮ, ಸೌಮ್ಯ, ಆಶಾ, ರಾಧಮ್ಮ, ರೂಪ, ಮಂಜುಳಮ್ಮ ಮುತ್ತೂರು ಉಮಾ, ಲಕ್ಷ್ಮಮ್ಮ ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!