ಪೂರ್ಣ ಪುಟ · Open full page

ಸಂವಿಧಾನ ದಿನಾಚರಣೆ: ಹಕ್ಕುಗಳ ಜೊತೆ ಕರ್ತವ್ಯವೂ ಮುಖ್ಯ ಎಂದ ತಹಶೀಲ್ದಾರ್

Tahsildar and officials of various departments raising their hands during the Constitution Day 2026 programme at the Sidlaghatta taluk office hall

Sidlaghatta : ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ತಾಲ್ಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಗಗನ ಸಿಂಧು, ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿದೆ ಎಂದರು.

ಹಕ್ಕುಗಳ ಜೊತೆ ನಾಗರಿಕರ ಕರ್ತವ್ಯವೇನು?

ಸಂವಿಧಾನದ ಆಶಯಗಳು ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಮಾಜ ನಿರ್ಮಾಣ ಸಾಧ್ಯ ಎಂದು ತಹಶೀಲ್ದಾರ್ ಅಭಿಪ್ರಾಯಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸ್ವಾಮಿ, ಪಶುವೈದ್ಯಾಧಿಕಾರಿ ಡಾ. ಶ್ರೀನಾಥ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್. ದೇವರಾಜ್, ದಲಿತ ಸಂಘರ್ಷ ಸಮಿತಿಯ ಚಲಪತಿ, ಅರಣ್ಯ ಇಲಾಖೆಯ ಲೋಕೇಶ್, ಸಿಡಿಪಿಒ ಇಲಾಖೆಯ ಶಿವು ಸೇರಿದಂತೆ ಬಿಸಿಎಂ, ರೇಷ್ಮೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕಿನ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ದಿನ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಉಚಿತ ಕಾನೂನು ನೆರವಿನ ಬಗ್ಗೆ ಮಾಹಿತಿ ನೀಡಲಾಯಿತು. ಕಳೆದ ವರ್ಷದ ಸಂವಿಧಾನ ದಿನಾಚರಣೆಯನ್ನೂ ಓದಿ.

🔔 ಹೊಸ ಸುದ್ದಿ ಫೋನ್‌ನಲ್ಲಿ ಬೇಕಾ?

ನ್ಯೂಸ್ ಬಂದ ತಕ್ಷಣ alert ಬರುತ್ತದೆ

Free ✔ ಯಾವಾಗ ಬೇಕಾದರೂ off
By turning on you agree to the Terms and Privacy Notice.

📈 ಇಂದಿನ silk rateCB ₹787 · BV ₹943 per kg🔥 ಹೆಚ್ಚು ಓದಿದ್ದುಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್: ಹಸುಗೂಸಿಗೆ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

⚠️ Report an error in this story

Nearby

📰 ಇದನ್ನೂ ಓದಿ

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version