
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶುಕ್ರವಾರ ಲಾಕ್‍ಡೌನ್ ಕಾರಣ ದಿಂದ ಸಂಕಷ್ಟಕ್ಕೆ ಒಳಗಾಗಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೀಡಿದ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್ ಅನ್ನು 72 ಮಂದಿ ಕಾರ್ಮಿಕರಿಗೆ ವಿತರಿಸಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಯಮುನಪ್ಪ ಕರೆ ಹನುಮಂತಪ್ಪ ಅವರು ಮಾತನಾಡಿದರು.
ಅರಿವಿನ ಕೊರತೆಯಿಂದ ಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಅಂಥವರಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾನೂನು ಪ್ರಕಾರ ಸಿಗಬೇಕಾದ ಸವಲತ್ತು ತಲುಪಿಸುವ ಕಾರ್ಯ ಮಾಡಬೇಕು. ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಪ್ರತ್ಯೇಕವಾಗಿ ಒದಗಿಸಿರುವ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್‍ಗಳನ್ನು ಸದುಪಯೋಗಪಡಿಸಿಕೊಳ್ಳುವ ಜತೆಗೆ, ಕೆಲಸದ ಸ್ಥಳದಲ್ಲಿ ನೈರ್ಮಲ್ಯ ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಂಡು ಆರೋಗ್ಯ ರಕ್ಷಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಮಿಕ ನಿರೀಕ್ಷಕಿ ಎಂ.ಮಂಜುಳಾ ಮಾತನಾಡಿ, “ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರಿಗೆ ಪಂಚಣಿ, ಮದುವೆ, ಹೆರಿಗೆ, ಶಿಕ್ಷಣ, ವೈದ್ಯಕೀಯ ವೆಚ್ಚ ಮುಂತಾದ ಸೌಲಭ್ಯಗಳನ್ನು ನೀಡುತ್ತಿದೆ. ನೋಂದಾಯಿತ ಕಾರ್ಮಿಕರಿಗೆ ಕೋವಿಡ್ ಲಾಕ್‌ಡೌನ್ ಕಾರಣಕ್ಕೆ 3,000 ರೂ ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಎಲ್ಲ ಕಾರ್ಮಿಕರು ಸರ್ಕಾರದಿಂದ ಬಂದಿರುವ ಆಹಾರ ಮತ್ತು ಸುರಕ್ಷತಾ ಕಿಟ್‍ಗಳನ್ನು ಪಡೆದು, ಇಲ್ಲಿಯೇ ಇದ್ದು ಕೆಲಸ ನಿರ್ವಹಿಸಬೇಕು” ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಸಂಜುಕುಮಾರ್ ಎ ಪಚ್ಚಾಪುರೆ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರ ಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi