ನಗರದ ಹೊರವಲಯದ ಹನುಮಂತಪುರದ ಬಳಿಯ ಬಿಸಿಎಂ ಹಾಸ್ಟೆಲ್ ಗೆ ಭಾನುವಾರ ಸಂಜೆ ಭೇಟಿ ನೀಡಿ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯರೊಂದಿಗೆ ಸಭೆ ನಡೆಸಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಪ್ರಾಥಮಿಕ ಹಂತದ ಕೊರೊನಾ ಸೊಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಕೊವಿಡ್ ಕೇರ್ ಸೆಂಟರ್ ಗಳನ್ನು ತೆರೆಯುತ್ತಿದ್ದು ಅದರ ವ್ಯವಸ್ಥೆಗಳನ್ನು ತಾಲ್ಲೂಕು ಹಂತದಲ್ಲಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸೊಂಕು ಹೆಚ್ಚಾದರೆ ಸೊಂಕಿತರಿಗೆ ಚಿಕಿತ್ಸೆ ನೀಡಲು ಮುಂಜಾಗ್ರತಾ ಕ್ರಮವಾಗಿ ಕೊವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ಗುರುತಿಸಿರುವ ಸ್ಥಳಗಳನ್ನು ಖುದ್ದಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ಸೊಂಕು ನಿಯಂತ್ರಣದಲ್ಲಿದ್ದು ಒಂದು ವೇಳೆ ಹೆಚ್ಚಾದರೆ ಸೊಂಕಿತರಿಗೆ ಚಿಕಿತ್ಸೆಯನ್ನು ಆಯಾ ತಾಲ್ಲೂಕುಗಳಲ್ಲಿ ನೀಡುವ ದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಯಂತೆ ಕೊವಿಡ್ ಕೇರ್ ಸೆಂಟರ್ ಗಳನ್ನು ತೆರೆಯುತ್ತೇವೆ. ಪ್ರಸ್ತುತ ಜಿಲ್ಲೆಯಲ್ಲಿ 10 ಸಾವಿರ ಬೆಡ್ ಗಳ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ತಾಲ್ಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಜನತೆ ಅನಗತ್ಯವಾಗಿ ಆತಂಕಪಡುವ ಅವಶ್ಯಕತೆಯಿಲ್ಲ ಎಲ್ಲರೂ ಸಾಮಾಜಿಕ ಅಂತರವನ್ನು ಪಾಲನೆ ಮಾಡಿ. ಅನವಶ್ಯಕವಾಗಿ ಹೊರಗಡೆ ಓಡಾಡದೇ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್, ಎಸಿ ರಘುನಂದನ್, ತಹಶೀಲ್ದಾರ್ ಕೆ.ಅರುಂಧತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹಾಜರಿದ್ದರು.