Home News ಜಿಲ್ಲಾ ಮಟ್ಟದ ಶಿಕ್ಷಕರ ಕ್ರಿಕೆಟ್ ಪಂದ್ಯಾವಳಿ ವಿಜೇತರು

ಜಿಲ್ಲಾ ಮಟ್ಟದ ಶಿಕ್ಷಕರ ಕ್ರಿಕೆಟ್ ಪಂದ್ಯಾವಳಿ ವಿಜೇತರು

0
Cricket Championship Sidlahgatta Dolphins Education Trust

Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ (Dolphin’s Educational Trust) ತಾಲ್ಲೂಕು ಮಟ್ಟದ ಖಾಸಗಿ ಶಿಕ್ಷಕರ ವಿವಿಧ ಸ್ಪರ್ಧೆಗಳು ಹಾಗೂ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರು ಜಿಲ್ಲಾ ಕೇಂದ್ರದ ಕೆ.ವಿ.ಕ್ಯಾಂಪಸ್ (K V Campus, Chikkaballapur) ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾದರು.

ತಾಲ್ಲೂಕು ಮಟ್ಟದ ಸ್ಪರ್ಧೆಗಳಲ್ಲಿ ಡಾಲ್ಫಿನ್ ವಿದ್ಯಾಸಂಸ್ಥೆಯ ಶಿಕ್ಷಕರು ಪ್ರಬಂಧ, ಭಾವಗೀತೆ, ವಾಲಿಬಾಲ್, ಕ್ರಿಕೆಟ್, ಥ್ರೋಬಾಲ್ ಸ್ಪರ್ಧೆಗಳಲ್ಲಿ ವಿಜೇತರಾದರೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಾಸವಿ ವಿದ್ಯಾಸಂಸ್ಥೆ, ಮ್ಯೂಸಿಕಲ್ ಚೇರ್ ನಲ್ಲಿ ಜ್ಞಾನ ಜ್ಯೋತಿ ವಿದ್ಯಾಸಂಸ್ಥೆ, ಬಾಲ್ ಇನ್ ಬ್ಯಾಸ್ಕೆಟ್ ನಲ್ಲಿ ಪ್ಯಾರೆಗಾನ್ ವಿದ್ಯಾಸಂಸ್ಥೆ, ಲೆಮನ್ ಆನ್ ದಿ ಸ್ಪೂನ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಬಾಲಾಜಿ ವಿದ್ಯಾಸಂಸ್ಥೆಯ ಶಿಕ್ಷಕರು ವಿಜೇತರಾದರು.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಶಿಕ್ಷಕರು ವಾಲಿಬಾಲ್, ಹಗ್ಗ ಜಗ್ಗಾಟ, ಕ್ರಿಕೆಟ್, ಥ್ರೋಬಾಲ್, ಭಾವಗೀತೆ ಗಾಯನ, ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version