
Sidlaghatta : ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂಭ್ರಮವನ್ನು ಜೂನ್ 7ರಂದು ಭಾನುವಾರ ಶಿಡ್ಲಘಟ್ಟದ ಕಾಂಗ್ರೆಸ್ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಮುಖಂಡ ಬಿ.ವಿ. ರಾಜೀವ್‌ಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಸುಮಾರು 6 ಸಾವಿರ ಮಂದಿಗೆ ಸಿಹಿ ಹಂಚುವುದರ ಜೊತೆಗೆ ಮಾಂಸಾಹಾರಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಭಾಗವಹಿಸಲಿದ್ದು, ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ರಾಜೀವ್‌ಗೌಡ ತಿಳಿಸಿದರು.