20.9 C
Sidlaghatta
Sunday, March 1, 2026

ದಲಿತ ಸಂಘರ್ಷ ಸಮಿತಿಯ ನಗರ ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ

- Advertisement -
- Advertisement -

ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ನಗರ ಶಾಖೆಯ ನೂತನ ಪದಾಧಿಕಾರಿಗಳನ್ನು ಗುರುವಾರ ಆಯ್ಕೆ ಮಾಡಿ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್ ಮಾತನಾಡಿದರು.
ಸಮಾಜದಲ್ಲಿರುವ ಎಲ್ಲಾ ಜಾತಿ ಮತ್ತು ಧರ್ಮಗಳ ಬಡವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರು ಶ್ರಮಿಸಿದ್ದು, ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆದು ಆದರ್ಶ ಸಮಾಜವನ್ನು ನಿರ್ಮಿಬೇಕೆಂದು ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದರು.
ಸಮಾಜದಲ್ಲಿ ಶೋಷಿತರು ಮತ್ತು ತುಳಿತಕ್ಕೆ ಒಳಗಾದ ಜನರ ಧ್ವನಿಯಾಗಿ ದಲಿತ ಸಂಘರ್ಷ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.
ನಗರ ಘಟಕದ ಸಂಚಾಲಕರಾಗಿ ನರೇಶ್‌ಬಾಬು, ಸಂಘಟನಾ ಸಂಚಾಲಕರಾಗಿ ಎನ್.ಮಂಜುನಾಥ್, ದೇವರಾಜು, ರಾಜು (ವಿಕ್ಟರ್), ಖಜಾಂಚಿ ಕೆ.ರವಿ, ಕಲಾ ಮಂಡಳಿ ಸಂಚಾಲಕರಾದ ವೆಂಕಟರಾಜು, ಸುಂದರ್‌ರಾಜು, ನರಸಿಂಹ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣ, ಅಖಿಲ್, ಓಬಳೇಶ್, ರಾಮಚಂದ್ರ, ಆನಂದ್, ಮುರಳಿ, ಎಂ.ಮAಜುನಾಥ್, ಶ್ರೀನಿವಾಸ್, ಮುರಳಿ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಹುಜುಗೂರು ವೆಂಕಟೇಶ್, ಲಕ್ಕೇನಹಳ್ಳಿ ವೆಂಕಟೇಶ್, ಚಿಕ್ಕದಾಸರಹಳ್ಳಿ ಜಿ.ವೆಂಕಟೇಶ್, ಮುನಿಕೃಷ್ಣಪ್ಪ, ದಲಿತ ಸಂಘರ್ಷ ಸಮಿತಿಯ ನಗರ ಸಂಚಾಲಕ ನರೇಶ್‌ಬಾಬು ಮತ್ತಿತರರು ಉಪಸ್ಥಿತರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!