32.5 C
Sidlaghatta
Thursday, March 28, 2024

ಸುಭದ್ರ ಪ್ರಜಾಪ್ರಭುತ್ವಕ್ಕೆ ಮತ ಚಲಾಯಿಸಿ: ಜಿಲ್ಲಾಧಿಕಾರಿ ಎಂ.ಎನ್.ನಾಗರಾಜು

Citizens Urged to Exercise Right to Vote in Secure Democracy

- Advertisement -
- Advertisement -

Sidlaghatta : ಮತದಾನ ನಮ್ಮ ಹಕ್ಕು ಹಾಗೂ ಪವಿತ್ರ ಕರ್ತವ್ಯ. ಈ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸುವ ಮೂಲಕ ಸುಭದ್ರ ಪ್ರಜಾಪ್ರಭುತ್ವ ಕಟ್ಟೊಣ. ಯಾರು ಕೂಡ ಮತದಾನದ ಅವಕಾಶದಿಂದ ವಂಚಿತರಾಗಬೇಡಿ ಎಂದು ಜಿಲ್ಲಾಧಿಕಾರಿ ನಾಗರಾಜು ಮನವಿ ಮಾಡಿದರು.

ಶಿಡ್ಲಘಟ್ಟ ನಗರದಲ್ಲಿ ಶನಿವಾರದಂದು ಬೆಳಿಗ್ಗೆ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿಯ ರ್ಯಾಲಿಗೆ ಜಿಲ್ಲಾಧಿಕಾರಿ ನಾಗರಾಜು ಅವರು ಎತ್ತುಗಳಿಗೆ ಬಾಳೆಹಣ್ಣು ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದ್ದ ಹಿನ್ನೆಲೆ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಿದೆ. ಸ್ಪರ್ಧೆ ಇರುವುದು ಸಹಜ. ಮತದಾನ ಪ್ರಕ್ರಿಯೆಯು ಸುಗಮವಾಗಿ ನಡೆಯಲು ಕೇಂದ್ರ ಮಿಲಿಟರಿ ಸೈನಿಕರು ತಪಾಸಣೆ ವೇಳೆಯಲ್ಲಿ ಉತ್ತಮವಾಗಿ ಕೆಲಸ ನಿಭಾಯಿಸುತ್ತಿದ್ದಾರೆ. ಶಿಡ್ಲಘಟ್ಟ ಸೇರಿದಂತೆ ಜಿಲ್ಲೆಯಾದ್ಯಂತ 18 ಚೆಕ್ ಪೋಸ್ಟ್ ಗಳಲ್ಲಿ ತನಿಖೆಯ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ನಿಯೋಜಿಸಿದ ತಂಡಗಳು ಉತ್ತಮ ರೀತಿಯಾಗಿ ತನಿಖಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದಾರೆ. ಅದೇ ರೀತಿಯಾಗಿ ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ಪೂರ್ಣ ಮತದಾನವನ್ನು ಮಾಡುವಂತೆ ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗಿದೆ. ಜಿಲ್ಲೆಯಾದ್ಯಂತ 32 ಪ್ರಕರಣಗಳು ದಾಖಲಾಗಿದ್ದು, ಚುನಾವಣಾ ಪ್ರಕ್ರಿಯೆಯು ಸಮಗ್ರ ಹಾಗೂ ನ್ಯಾಯ ಸಮ್ಮತ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ತಾಲ್ಲೂಕು ಪಂಚಾಯಿತಿ ವತಿಯಿಂದ 28 ಗ್ರಾಮ ಪಂಚಾಯಿತಿಯ ಪೈಕಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಹಾಗೂ ಕಾರ್ಯದರ್ಶಿಯವರ ನೇತೃತ್ವದಲ್ಲಿ ಹೋಬಳಿವಾರು ತಂಡಗಳಾಗಿ ವಿಂಗಡಿಸಿ‌ ತಾಲ್ಲೂಕಿನಾದ್ಯಂತ ದುರ್ಬಲ ಹಾಗೂ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಿಗೆಟ್ಟೆಗಳಲ್ಲಿ ಮತದಾನ ಅರಿವು ಮತ್ತು ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾರ್ಯಪ್ರವೃತ್ತವಾಗಿರುವ ಜಿಲ್ಲಾಡಳಿತ, ಮತದಾನ ಪ್ರಕ್ರಿಯೆ ಹೆಚ್ಚಳಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿಯು ವಿವಿಧ ರೀತಿಯ ಅರಿವು‌ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ರೂಪಿಸಿ ಕಾರ್ಯರೂಪಕ್ಕೆ ತರುತ್ತಿದೆ.

ಮತದಾನದ ಅರಿವು ಮೂಡಿಸುವ ಬ್ಯಾನರ್ ಕಟ್ಟಿದ ಎತ್ತಿನಗಾಡಿಯ ಎತ್ತುಗಳಿಗೆ ಬಾಳೆಹಣ್ಣು ತಿನ್ನಿಸಿ, ಎಲ್ಲಾ ಮತದಾರರು ಮೇ 10 ರಂದು ತಪ್ಪದೆ ತಮ್ಮ ಮತಗಟ್ಟೆಗಳಿಗೆ ತೆರಳಿ ಹಕ್ಕು ಚಲಾಯಿಸಬೇಕು ಎಂಬ ಸಂದೇಶ ಸಾರುವ ಮೆರವಣಿಗೆಗೆ ಚಾಲನೆ ನೀಡಿದರು.

ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ, ಶಿಡ್ಲಘಟ್ಟ ತಾಲ್ಲೂಕು ಚುನಾವಣಾಧಿಕಾರಿ ಜಾವಿದ ನಸೀಮಾ ಖಾನಮ್, ನಗರಸಭೆ ಪೌರಾಯುಕ್ತ ಶ್ರೀಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಸಿಡಿಪಿಒ ನೌತಾಜ್, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ ವರ್ಗದವರು ಹಾಜರಿದ್ದರು.


DC Leads Voting Awareness Rally in Sidlaghatta

Sidlaghatta : DC Nagaraju led a voting awareness rally at Nehru Stadium in Sidlaghatta city, urging citizens not to be deprived of their right to vote. The election process has begun in Sidlaghatta Assembly Constituency, with competition among candidates. Central military personnel are ensuring a smooth voting process, while 18 check posts across the district are under investigation.

To encourage comprehensive and fair participation in the election process, 32 cases have been registered across the district. The taluk panchayat organized a Jatha program to create voting awareness in weak polling stations across the taluk, with the support of the panchayat development officer and secretary. The district administration, in collaboration with district and taluk SVEEP committees, is planning and implementing various awareness programs to increase voter turnout. District Collector Nagaraju started the rally by feeding bananas to the oxen of a bullock-cart, with a banner advocating for voting rights.

The event was attended by various officials, including G.P. Chief Executive Officer Prakash GT Nittali, T.P. Executive Officer Muniraja, and Taluk Electoral Officer Javida Naseema Khanam.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!