Home News ರೈತರು ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು

ರೈತರು ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು

0
DCC Bank Sidlaghatta Agriculture Loan

ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಬುಧವಾರ ಆನೇಮಡುಗು ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಸುಮಾರು 67 ಮಂದಿ ರೈತರಿಗೆ ಕೆಸಿಸಿ ಸಾಲ ವಿತರಿಸಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ಮಾತನಾಡಿದರು.

ತೀವ್ರ ಮಳೆಯ ಅಭಾವದ ಜೊತೆಗೆ ಕೊರೋನಾ ಸಂಕಷ್ಟದ ಸ್ಥಿತಿಯಲ್ಲಿಯೂ ರೈತರಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡುತ್ತಿದ್ದು ಪಡೆದುಕೊಂಡ ಸಾಲವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು.ಆರ್ಥಿಕ ಸಂಕಷ್ಟದ ನಡುವೆ ಡಿಸಿಸಿ ಬ್ಯಾಂಕಿನಿಂದ ನೀಡುತ್ತಿರುವ ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಉಳಿತಾಯದ ಹಣವನ್ನು ಸಹಕಾರ ಸಂಘ ಅಥವ ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಡುವ ಮೂಲಕ ಬ್ಯಾಂಕಿನ ಏಳಿಗೆಗಾಗಿ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಆನೇಮಡುಗು ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಸುಮಾರು 67 ಮಂದಿಗೆ ಒಂದು ಕೋಟಿ ಇಪ್ಪತ್ತೇಳು ಲಕ್ಷದ ಎಂಬತ್ತೈದು ಸಾವಿರ (1,27,85,000) ರೂಗಳ ಸಾಲ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆನೇಮಡುಗು ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಡಾ.ಎ.ಎಂ.ಜಯರಾಮರೆಡ್ಡಿ, ಉಪಾಧ್ಯಕ್ಷ ಸಿ.ವೆಂಕಟೇಶಪ್ಪ, ನಿರ್ದೇಶಕರಾದ ಡಿ.ಬಿ.ವೆಂಕಟೇಶ್, ಕೆ.ನರಸಿಂಹಮೂರ್ತಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಕೆ.ವಿ.ಶ್ರೀನಾಥ್, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವರೆಡ್ಡಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version