Sidlaghatta : ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರಮಿಕ ಕರ್ನಾಟಕ ರಾಜ್ಯ ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಕೆ.ಎಸ್.ಆರ್.ಟಿ.ಸಿ ಅಧಿಕಾರಿ ಚಂದ್ರಪ್ಪ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ಶ್ರಮಿಕ ಕರ್ನಾಟಕ ರಾಜ್ಯ ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಖಜಾಂಚಿ ಮೊಹಮ್ಮದ್ ಅಮಾನುಲ್ಲಾ ಮಾತನಾಡಿ, ಶಿಡ್ಲಘಟ್ಟದಿಂದ ಬೆಂಗಳೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗು ಕೈವಾರ ರಸ್ತೆಯಲ್ಲಿರುವ ವಿವಿಧ ಶಾಲಾ ಕಾಲೇಜುಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆಯಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ಕಾಲೇಜುಗಳಿಗೆ ಹೋಗಲು ಆಗುತ್ತಿಲ್ಲ. ಹಾಗಾಗಿ ಕೂಡಲೇ ಬೆಳಗ್ಗೆ 8.30 ರಿಂದ 9 ಗಂಟೆಯೊಳಗೆ ಒಂದೆರಡು ಹೆಚ್ಚುವರಿ ಬಸ್‌ಗಳನ್ನು ಹಾಕಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ರಾಜ್ಯ ಸಮಿತಿ ಸದಸ್ಯ ಮೊಹಮ್ಮದ್ ಸಿಗ್ಬಹತ್ ಉಲ್ಲಾ. ಜಿಲ್ಲಾ ಸಮಿತಿ ಸದಸ್ಯ ಸಾಯಿರಾಂ ಸೂರಜ್. ಮನೋಜ್, ನಿತಿನ್‌ಕುಮಾರ್, ಪ್ರಶಾಂತ್, ಸಂದೀಪ್, ಕೀರ್ತನ, ಯಶ್ವಂತ್ ಹಾಜರಿದ್ದರು.