ಒತ್ತುವರಿ ಶಂಕೆಯ ಕಟ್ಟೆ ಜಮೀನಿಗೆ ಜಿಲ್ಲಾಧಿಕಾರಿ ಭೇಟಿ: ಸರ್ವೆ ನಡೆಸಿ ನಿಖರವಾಗಿ ಗುರುತಿಸಲು ಸೂಚನೆ

Deputy Commissioner and officials pointing out land during a field inspection

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ವಿವಿಧ ಗ್ರಾಮಗಳಿಗೆ ಸೋಮವಾರ ಜಿಲ್ಲಾಧಿಕಾರಿ ಪ್ರಭು ಜಿ. ಭೇಟಿ ನೀಡಿ, ಸರ್ಕಾರಿ ಜಮೀನುಗಳ ಒತ್ತುವರಿ, ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

ಕರಿಯನಪುರದಲ್ಲಿ ಒತ್ತುವರಿ ಪರಿಶೀಲನೆ

ಕರಿಯನಪುರ ಗ್ರಾಮದ ಸರ್ವೆ ನಂ. 44ರಲ್ಲಿರುವ 1 ಎಕರೆ 27 ಗುಂಟೆ ವಿಸ್ತೀರ್ಣದ ಖರಾಬು ಕಟ್ಟೆ ಜಮೀನನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಜಮೀನನ್ನು ಸರ್ವೆ ಮಾಡಿ ಒತ್ತುವರಿಯಾಗಿರುವ ಪ್ರದೇಶವನ್ನು ನಿಖರವಾಗಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಒತ್ತುವರಿ ದೃಢಪಟ್ಟರೆ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ತೆರವುಗೊಳಿಸಲು ತಹಶೀಲ್ದಾರ್ ಗಗನ ಸಿಂಧು ಮತ್ತು ರಾಜಸ್ವ ನಿರೀಕ್ಷಕರಿಗೆ ನಿರ್ದೇಶನ ನೀಡಿದರು.

Deputy Commissioner reviewing land records with revenue officials during a field visit

ನಾಡಕಚೇರಿಯಲ್ಲಿ ಅರ್ಜಿ ವಿಲೇವಾರಿ ಪರಿಶೀಲನೆ

ಬಳಿಕ ಜಂಗಮಕೋಟೆ ನಾಡಕಚೇರಿಗೆ ಭೇಟಿ ನೀಡಿ, ಪ್ರಜಾಸೇವಾ ಆಂದೋಲನದಡಿ ಸ್ವೀಕರಿಸಿದ ಅರ್ಜಿಗಳು ಸೇರಿದಂತೆ ಸಾರ್ವಜನಿಕರ ಮನವಿಗಳ ವಿಲೇವಾರಿಯನ್ನು ಪರಿಶೀಲಿಸಿದರು. ಅರ್ಜಿಗಳನ್ನು ವಿಳಂಬ ಮಾಡದೆ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸೆಪ್ಟೆಂಬರ್‌ನಲ್ಲಿ ಪ್ರಜಾಸೇವಾ ಆಂದೋಲನದ ಅರ್ಜಿ ರಸೀದಿ ವಿಷಯದಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು.

ಸುಗಟೂರಿನಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ

ನಂತರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರೊಂದಿಗೆ ಸುಗಟೂರು ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಳವನ್ನು ಪರಿಶೀಲಿಸಿದರು. ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಂಡು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

Deputy Commissioner and officials looking at a survey map at the site

ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹೇಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.