Devaramallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸುಶೀಲಮ್ಮ ಹಾಗೂ ಉಪಾಧ್ಯಕ್ಷರಾಗಿ ಅನಸೂಯಮ್ಮ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ದೇವರಮಳ್ಳೂರು ಗ್ರಾಮಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಸುಶೀಲಮ್ಮ ಮತ್ತು ಕಾಂಗ್ರೆಸ್ ಬೆಂಬಲಿತ ಸುಗುಣಮ್ಮ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅನಸೂಯಮ್ಮ ಮತ್ತು ಕಾಂಗ್ರೆಸ್ ಬೆಂಬಲಿತ ಶಿವಣ್ಣ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ಸುಶೀಲಮ್ಮ 10 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಸುಗುಣಮ್ಮ 6 ಮತಗಳನ್ನು ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ಅನಸೂಯಮ್ಮ 9 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಶಿವಣ್ಣ 7 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.
ಜೆಡಿಎಸ್ ಬೆಂಬಲಿತ ಸುಶೀಲಮ್ಮ ರನ್ನು ಅಧ್ಯಕ್ಷರಾಗಿ ಹಾಗೂ ಅನಸೂಯಮ್ಮರನ್ನು ಉಪಾಧ್ಯಕ್ಷರನ್ನಾಗಿ ಚುನಾವಣಾಧಿಕಾರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಮಂಜುಳ ಘೋಷಿಸಿದರು.
ಗ್ರಾ.ಪಂ ಪಿಡಿಓ ಗೋಪಾಲ್, ಗ್ರಾ.ಪಂ ಮಾಜಿ ಅಧ್ಯಕ್ಷ ಕೆಂಪೇಗೌಡ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.
For Daily Updates WhatsApp ‘HI’ to 7406303366
