ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆ ಬೆಳೆಸುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ. ಮಹಿಳೆಯರಲ್ಲಿ ತಮ್ಮ ಜೀವನ ನಿರ್ವಹಣೆಗಾಗಿ ಮತ್ತು ಮುಂದಿನ ತನ್ನ ಕುಟುಂಬ ನಿರ್ವಹಣೆಗೆ ವಿಶೇಷ ಯೋಜನೆಗಳನ್ನು ರೂಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಕಾರ್ಯಗತಗಳಿಸುತ್ತಿರುವುದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾ ನಿರ್ದೇಶಕರಾದ ಸಿ.ಎಸ್.ಪ್ರಶಾಂತ್ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹೊಸದಾಗಿ ರಚಿಸಿದ 5 ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸ್ವ ಸಹಾಯ ಸಂಘಗಳ ಮೂಲಕ ಲಕ್ಷಾಂತರ ಮಂದಿ ಉತ್ತಮ ಬದುಕನ್ನು ಕಟ್ಟಿಕೊಂಡು ಅರ್ಥಿಕವಾಗಿ ಸಧೃಡರಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯೂ ಸದಸ್ಯರಿಗೆ ಕೇವಲ ಅರ್ಥಿಕ ಸಹಕಾರ ನೀಡುವುದು ಮಾತ್ರವಲ್ಲದೇ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಿಕೊಡುತ್ತಿದ್ದು ಸಂಸ್ಥೆಯ ಹತ್ತು ಹಲವಾರು ಕಾರ್ಯಕ್ರಮಗಳು ಸಮಾಜದ ದುರ್ಬಲ ವರ್ಗದವರಿಗೆ ಆಶಾಕಿರಣವಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್‌ಕುಮಾರ್, ಅನ್ನದಾಸೋಹ ಸಮಿತಿ ಅಧ್ಯಕ್ಷ ರಮೇಶ್, ಖಜಾಂಚಿ ವೆಂಕಟರಾಮು , ಗ್ರಾಮ ಪಂಚಾಯಿತಿಸದಸ್ಯರಾದ ಅಯ್ಯಣ್ಣ, ಸರಸ್ವತಮ್ಮ, ನಾಗರಾಜ್ ರಾಜಣ್ಣ. ಒಕ್ಕೂಟದ ಅಧ್ಯಕ್ಷೆ ರಾಜೇಶ್ವರಿ, ಪದಾಧಿಕಾರಿ ಸುಜಾತಮ್ಮ ಮೇಲ್ವಿಚಾರಕಿ ಆಶಾ, ಸೇವಾಪ್ರತಿನಿಧಿ ವೀಣಾ ಹಾಜರಿದ್ದರು.