Sidlaghatta : ತಾಲ್ಲೂಕಿನ ಮೂವರು ಶಿಕ್ಷಕರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
In English: Three teachers from Sidlaghatta taluk have been selected for the district-level Best Teacher Award, to be conferred at a Teachers’ Day event in Chikkaballapur on September 5.
ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಸೆ.5ರ ಶನಿವಾರ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಮೂವರು ಶಿಕ್ಷಕರನ್ನು ಸನ್ಮಾನಿಸಲಾಗುವುದು.
ಶಿಡ್ಲಘಟ್ಟ ತಾಲ್ಲೂಕಿನ ಚನ್ನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವೆಂಕಟರವಣಪ್ಪ ಎನ್., ಬ್ರಾಹ್ಮಣರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿ ಹಾಗೂ ಶಿಡ್ಲಘಟ್ಟ ಸರ್ಕಾರಿ ಪ್ರೌಢಶಾಲೆಯ ಸೈಯದಾ ಇಶ್ರತ್ ಅವರು ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಸೇರಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಜಿಲ್ಲಾ ಶಿಕ್ಷಣ ಇಲಾಖೆ ಈ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕವಾಗಿ ಗೌರವಿಸಲಿದೆ.

