Home News ಚಾಗೆ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮ

ಚಾಗೆ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮ

0
District commissioner speaks to villagers during a doorstep delivery program

Chage, Sidlaghatta : ಸಾರ್ವಜನಿಕರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಾರ್ವಜನಿಕರಿಗೆ ಸಹಕಾರಿಯಾಗಿದೆ ಎಂದು ತಾ.ಪಂ ಇಓ ಜಿ.ಮುನಿರಾಜ ಹೇಳಿದರು.

ಶಿಡ್ಲಘಟ್ಟ ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಗೆ ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನತೆ ತಮಗೆ ಸಿಗಬೇಕಾದ ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಆಲಿಸುವ ಮೂಲಕ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಪೌತಿ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಪೋಡಿ, ಉಳುಮೆ ಚೀಟಿ, ಪಡಿತರ ಚೀಟಿ, ಹಕ್ಕು ಪತ್ರಗಳ ವಿತರಣೆ ಮಾಡುವ ಸಲುವಾಗಿ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಸಾರ್ವಜನಿಕರಿಗೆ ಸಹಕಾರಿಯಾಗಿದೆ. ರೈತರು ಕಂದಾಯ ಇಲಾಖೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಹಬ್ಬ ಎಂದೇ ಹೆಸರಾಗಿರುವ ಚುನಾವಣೆ ಸಮೀಪಿಸುತ್ತಿದ್ದು ಈಗಾಗಲೇ ಸ್ವೀಪ್ ಸಮಿತಿಯಿಂದ ಚುನಾವಣೆ ಹಾಗು ಮತದಾನದ ಮಹತ್ವದ ಕುರಿತು ಹೆಚ್ಚಿನ ಪ್ರಚಾರ ಮಾಡಲಾಗುತ್ತಿದೆ. ಚುನಾವಣೆ ಹಾಗು ಮತದಾನದ ಕುರಿತು ಪ್ರಚಾರ ಕಾರ್ಯದಲ್ಲಿ ಸಾರ್ವಜನಿಕರು ಸಹ ಹೆಚ್ಚಾಗಿ ಪಾಲ್ಗೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ವಿವಿಧ ಫಲಾನುಭವಿಗಳಿಗೆ ಮಾಶಾಸನದ ಆಧೆಶಪ್ರತಿಗಳನ್ನು ವಿತರಿಸಲಾಯಿತು. ಗ್ರಾಮದಲ್ಲಿ ಕೈಗೊಳ್ಳಬೇಕಾದ ವಿವಿಧ ಕಾಮಗಾರಿಗಳಿಗಾಗಿ ಕಂದಾಯ ಇಲಾಖೆಯಿಂದ ಸುಮಾರು ೩೦ ಗುಂಟೆ ಜಾಗವನ್ನು ತಾಲೂಕು ಪಂಚಾಯಿತಿಗೆ ಹಸ್ತಾಂತರಿಸಲಾಯಿತು.

ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸಲು ನಾಯ್ಡು, ಎಡಿಎಲ್‌ಆರ್ ವಸಂತಕುಮಾರ್, ಗ್ರಾಮಪಂಚಾಯಿತಿ ಅಧ್ಯಕ್ಷೆ ನಿರ್ಮಲ ಬೈರೇಗೌಡ, ಉಪಾಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಹರೀಶ್, ಮುನಿರೆಡ್ಡಿ, ಪಿಡಿಓ ವೀಣಾ ಹಡಪದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲಕ್ಷ್ಮಿದೇವಮ್ಮ, ಕಾರ್ಮಿಕ ಇಲಾಖೆಯ ವಿಜಯಲಕ್ಷ್ಮಿ, ಶಿಕ್ಷಣ ಇಲಾಖೆಯ ಎನ್.ತ್ಯಾಗರಾಜ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Deputy Commissioner’s Doorstep Delivery Scheme Praised by EO G. Muniraja

Chage, Sidlaghatta : The government’s efforts to deliver benefits directly to the public’s doorstep through the actions of district commissioners have been commended by EO G. Muniraja. During “Jilladhikari Nade Halligala Kade” program organized on Saturday in Chage village under Abloodu village panchayat of Sidlaghatta taluk, the District Collector spoke about the scheme’s potential to benefit rural communities by eliminating the need for them to travel to offices to avail necessary services.

By listening to the problems faced by various departments, including the Revenue Department, the district commissioners are taking steps to solve them on-site wherever possible. The program aims to distribute Pauthi Khata changes, Pahani amendments, PODI, Plowing certificates, Ration certificates, and Right deeds under the jurisdiction of the Revenue Department.

The revenue department distributed Mashasans to various beneficiaries during the event, and the department also handed over about 30 guntas of land to the Taluk Panchayat for various village works. The program is designed to provide relief to farmers who can apply to the Revenue Department with appropriate documentation.

As the election, known as the festival of democracy, approaches, the sweep committee is already engaging in extensive publicity about the importance of voting. Muniraja urged the public to participate in campaigning and voting.

The event was attended by officials from various departments, including Grade 2 Tehsildar Srinivasalu Naidu, ADLR Vasantakumar, Gram Panchayat President Nirmala Byregowda, Vice President Narayanaswamy, Members Harish, Munireddy, PDO Veena Hadapad, Women and Child Welfare Department Lakshmidevamma, Labor Department Vijayalakshmi, and Education Department N. Thyagaraj.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version