ಪೂರ್ಣ ಪುಟ · Open full page
News

ಯುವಜನೋತ್ಸವ ಚಿತ್ರಕಲೆ ಸ್ಪರ್ಧೆ: ವಿದ್ಯಾರ್ಥಿನಿ ಹುಸ್ನಾ ರಾಜ್ಯ ಮಟ್ಟಕ್ಕೆ ಆಯ್ಕೆ

PU college student Husna receiving a certificate at the district-level youth festival painting competition in Chikkaballapur

Sidlaghatta : ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದ ಚಿತ್ರಕಲೆ ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಎ.ಆರ್.ಎಂ. ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ (PCMB) ವಿದ್ಯಾರ್ಥಿನಿ ಹುಸ್ನಾ ವಿಜೇತರಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನವೆಂಬರ್ 3ರಂದು ಚಿಕ್ಕಬಳ್ಳಾಪುರ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ಚಿತ್ರಕಲೆಯಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ವಿಜೇತರಾಗಿರುವ ಹುಸ್ನಾ ಕಾಲೇಜು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್, ಪ್ರಾಂಶುಪಾಲ ಡಾ. ಮೂರ್ತಿ ಸಾಮ್ರಾಟ್, ಉಪಪ್ರಾಂಶುಪಾಲೆ ಮಮತಾ, ಉಪನ್ಯಾಸಕರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

ಸಂಬಂಧಿತ ಸುದ್ದಿ: ಪಿಯು ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ: ವಾಲಿಬಾಲ್, ಹ್ಯಾಂಡ್‌ಬಾಲ್, ಟೇಕ್ವಾಂಡೋದಲ್ಲಿ ಸಾಧನೆ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Exit mobile version