ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ

- Advertisement -
- Advertisement -

Doddatekahalli, Sidlaghatta : ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮಾಡಬೇಕು ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ರಾಮಚಂದ್ರಪ್ಪ ಹೇಳಿದರು.

ದೊಡ್ಡತೇಕಹಳ್ಳಿ ಗ್ರಾಮಪಂಚಾಯಿತಿಯ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ ಸಾಧ್ಯತೆಯೆಡೆಗೆ ಮಕ್ಕಳ ಹಕ್ಕುಗಳ ತರಬೇತಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಸಾಮರ್ಥ್ಯ‌ವರ್ಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿಯೊಂದು ಹುಟ್ಟುವ ಮಗು ಗಂಡು ಇರಲಿ, ಹೆಣ್ಣು ಇರಲಿ ಅವುಗಳ ಬದುಕಿಸುವ ಸಲುವಾಗಿ ಈ ಮಕ್ಕಳ ಹಕ್ಕುಗಳನ್ನು ಜಾರಿಗೆ ತರಲಾಯಿತು. ಭಿಕ್ಷಾಟನೆ, ನಿರ್ಗತಿಕ ಮಕ್ಕಳು ಜಿಲ್ಲೆಯಲ್ಲಿ ಎಲ್ಲೆ ಕಂಡು ಬಂದರೂ ಮಕ್ಕಳ ರಕ್ಷಣಾ ಘಟಕಕ್ಕೆ ತಿಳಿಸಿ ಅಥವಾ 1098 ಕರೆ ಮಾಡಿ ಮಾಹಿತಿ ನೀಡಿದರೆ ಸಾಕು ಅವರ ರಕ್ಷಣೆಯನ್ನು ಮಾಡಲಾಗುತ್ತದೆ ಎಂದರು.

ಚೈಲ್ಡ್‌ ರೈಟ್ಸ್‌ ಸಂಸ್ಥೆಯ ಸದಸ್ಯ ಸಿ ಆರ್ ಟಿ ಮಂಜುನಾಥ್ ಮಾತನಾಡಿ, ಹೆಣ್ಣು ಮಕ್ಕಳ ಮೇಲಿನ ಕೌಟಿಂಬಿಕ ದೌರ್ಜನ್ಯ ನಿಲ್ಲಿಸುವುದು, ಬಾಲ್ಯ ವಿವಾಹ ನಿಷೇಧ ಮಾಡುವುದು, ಮಕ್ಕಳ ಹಕ್ಕುಗಳ ಕುರಿತು ವ್ಯಾಪಕ ಪ್ರಚಾರ, ಮಕ್ಕಳು ಮತ್ತು ಹೆಣ್ಣು ಮಕ್ಕಳ ಸಾಗಾಣಿಕೆ ವಿರುದ್ಧ ಮಾಹಿತಿ ನೀಡುವುದು, ಶಿಕ್ಷಣ ನೀಡಿ ಕಿಶೋರಿಯರ ಸಬಲೀಕರಣ ಮಾಡುವುದು, ಬಾಲ ಕಾರ್ಮಿಕ ಪದ್ಧತಿಯನ್ನು ನಿಷೇಧ ಮಾಡುವುದು ನಮ್ಮ ಗುರಿಯಾಗಿದೆ. ಗ್ರಾಮ ಪಂಚಾಯಿತಿಗಳು ಮಕ್ಕಳ ಸ್ನೇಹಿ ಮತ್ತು ಮಹಿಳಾ ಸ್ನೇಹಗಳಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಸದಸ್ಯೆ ಅಶ್ವಥ್ಥಮ್ಮ,ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿ ಆರ್ ಡಬ್ಲ್ಯೂ , ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!