News

ಜಿಲ್ಲಾ ಮಟ್ಟದ ವಾಲಿಬಾಲ್‌ನಲ್ಲಿ ಡಾಲ್ಫಿನ್ಸ್ ಕಾಲೇಜು ಚಾಂಪಿಯನ್: ರಾಜ್ಯಮಟ್ಟಕ್ಕೆ ಅರ್ಹತೆ

Dolphins PU College volleyball team district champions with trophy and medals, Sidlaghatta

Sidlaghatta : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ 2026–27ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಕೂಟದಲ್ಲಿ ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದೆ.

ಜಿಲ್ಲಾ ಕ್ರೀಡಾಕೂಟದಲ್ಲಿ ಬಲಿಷ್ಠ ತಂಡಗಳನ್ನು ಎದುರಿಸಿದ ಡಾಲ್ಫಿನ್ಸ್ ಕಾಲೇಜಿನ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಗೆದ್ದರು. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್. ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.

ಯಾರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ?

ಇದರೊಂದಿಗೆ ಕರಾಟೆ ಹಾಗೂ ಭಾರ ಎತ್ತುವ ಸ್ಪರ್ಧೆಗಳಲ್ಲಿಯೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕ್ರೀಡಾಪಟುಗಳು ಸಂಸ್ಥೆಯ ಕ್ರೀಡಾ ಶಿಕ್ಷಣ ನಿರ್ದೇಶಕ ಪ್ರೊ. ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದಿಸಿ ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್. ಅಶೋಕ್, “ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಡಾಲ್ಫಿನ್ಸ್ ಸಂಸ್ಥೆ ಗಮನಾರ್ಹ ಸಾಧನೆ ಮಾಡುತ್ತಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಗೌರವಕ್ಕೆ ಧಕ್ಕೆಯಾಗದಂತೆ ಸ್ಪರ್ಧಿಸಬೇಕು. ನಿತ್ಯ ಕಠಿಣ ಅಭ್ಯಾಸದೊಂದಿಗೆ ಸಂಯಮ ಮತ್ತು ಕ್ರೀಡಾ ಮನೋಭಾವದಿಂದ ಆಟವಾಡಿ ಜಿಲ್ಲೆಯ ಘನತೆಯನ್ನು ಎತ್ತಿಹಿಡಿಯಬೇಕು” ಎಂದು ಕಿವಿಮಾತು ಹೇಳಿದರು.

ತಾಲ್ಲೂಕಿನ ಇತ್ತೀಚಿನ ಕ್ರೀಡಾ ಸುದ್ದಿಗಳಾದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: 213 ಕ್ರೀಡಾಪಟುಗಳ ನೋಂದಣಿ, ವಿಜೇತರಿಗೆ ಪದಕ ಹಾಗೂ ಪದವಿ ಪೂರ್ವ ಕಾಲೇಜುಗಳ ಮೂರು ದಿನಗಳ ಕ್ರೀಡಾಕೂಟಕ್ಕೆ ಚಾಲನೆ ವರದಿಗಳನ್ನೂ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.