ಶಿಕ್ಷಣ, ಕ್ರೀಡೆ, ಹವ್ಯಾಸವೇ ಮಾದಕ ವಸ್ತುಗಳಿಗೆ ಪರಿಹಾರ: ವಿದ್ಯಾರ್ಥಿಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಕರೆ

Senior Civil Judge Mohammed Roshan Shah and officials flagging off the drug awareness rally at the government PU college

Sidlaghatta : ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನರು ವ್ಯಸನಕ್ಕೆ ಬಲಿಯಾಗದೆ, ಶಿಕ್ಷಣ, ಕ್ರೀಡೆ ಮತ್ತು ಉತ್ತಮ ಹವ್ಯಾಸಗಳ ಮೂಲಕ ಆರೋಗ್ಯಕರ ಬದುಕು ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮ್ಮದ್ ರೋಷನ್ ಷಾ ತಿಳಿಸಿದರು.

ತಾಲ್ಲೂಕು ಆಡಳಿತ, ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ, ಶಿಕ್ಷಣ, ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮತ್ತು ಕ್ಷೇಮಾಭಿವೃದ್ಧಿ ಮಾರ್ಗದರ್ಶನ – ಮಾದಕ ವಸ್ತು ಮುಕ್ತ ಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾಗೃತಿ ಜಾಥಾಕ್ಕೆ ಚಾಲನೆ

ಮಾದಕ ವಸ್ತುಗಳ ವ್ಯಸನ ಯುವಜನರ ಭವಿಷ್ಯವನ್ನೇ ಹಾಳುಮಾಡುವ ಅಪಾಯ ಹೊಂದಿದೆ. ವಿದ್ಯಾರ್ಥಿಗಳು ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಬೆಳೆಸಿಕೊಂಡು, ದುಶ್ಚಟಗಳಿಂದ ದೂರವಿದ್ದು ಜೀವನದ ಗುರಿ ಸಾಧನೆಗೆ ಆದ್ಯತೆ ನೀಡಬೇಕು. ತಾವು ಜಾಗೃತರಾಗುವುದರ ಜೊತೆಗೆ ಇತರರಲ್ಲೂ ಅರಿವು ಮೂಡಿಸುವ ಜವಾಬ್ದಾರಿ ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಅವರು ಚಾಲನೆ ನೀಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ ಸಿ.ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ, ತಹಶೀಲ್ದಾರ್ ಗಗನ ಸಿಂಧು, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ ಪಿ., ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್. ದೇವರಾಜ್, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೃಷ್ಣಮೂರ್ತಿ, ಎ.ಸಿ.ಡಿ.ಪಿ.ಒ. ಲಕ್ಷ್ಮಿದೇವಮ್ಮ, ಕಾಲೇಜಿನ ಪ್ರಾಂಶುಪಾಲ ಸಿ.ವಿ. ರೆಡ್ಡಿ, ಮುಖ್ಯಶಿಕ್ಷಕ ಸೈಯದ್ ಇಶರತ್, ಸರ್ಕಾರಿ ಅಭಿಯೋಜಕ ಶ್ರೀನಾಥ್, ಪ್ಯಾನಲ್ ವಕೀಲ ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಸರ್ಕಲ್ ಇನ್ ಸ್ಪೆಕ್ಟರ್ ಆನಂದ್ ಕುಮಾರ್ | ಡಾಲ್ಫಿನ್ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಂದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಬೀದಿ ನಾಟಕ

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ