Home News ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ದಸಂಸ

ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ ದಸಂಸ

0

ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ನಡೆದಿರುವ ಅನುದಾನ ದುರುಪಯೋಗದ ಬಗ್ಗೆ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ನೀಡಿರುವ ಆಶ್ವಾಸನೆಯ ಹಿನ್ನಲೆಯಲ್ಲಿ ದಸಂಸ ಜಿಲ್ಲಾ ಘಟಕದ ಸೂಚನೆಯ ಮೇರೆಗೆ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ದಲಿತ ಮುಖಂಡ ಗಂಜಿಗುಂಟೆ ನರಸಿಂಹಮೂರ್ತಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಳೆದ ಮೇ 21 ರ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹದ ಆರನೇ ದಿನವಾದ ಶನಿವಾರ ಶಾಸಕರ ಆಪ್ತ ಸಹಾಯಕ ನಾರಾಯಣಗೌಡರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ನಡೆದಿರುವ ಅನುದಾನ ದುರುಪಯೋಗದ ಬಗ್ಗೆ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು. ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಸಮಿತಿಯೊಂದನ್ನು ರಚಿಸಿದ್ದು ಮುಂಬರುವ ಅಕ್ಟೋಬರ್ 5 ರೊಳಗೆ ನಮ್ಮ ಬೇಡಿಕೆಗಳು ಈಡೇರಿಸುವ ಭರವಸೆ ನೀಡಿದ್ದಾರೆ. ಒಂದು ವೇಳೆ ಅಷ್ಟರೊಳಗೆ ಬೇಡಿಕೆಗಳು ಈಡೇರದಿದ್ದಲ್ಲಿ ಅಕ್ಟೋಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಬೀಗಮುದ್ರೆ ಹಾಕುವ ಜೊತೆಗೆ ಜಿಲ್ಲಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡುತ್ತಾ ಶಾಸಕರ ಗೈರು ಹಾಜರಿಯಲ್ಲಿ ಅವರ ಆಪ್ತ ಸಹಾಯಕ ನಾರಾಯಣಗೌಡರ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಎಲ್.ವಿ.ವೆಂಕಟೇಶ್, ಡಿ.ಎಂ.ವೆಂಕಟೇಶ್, ಹುಜಗೂರು ವೆಂಕಟೇಶ್, ನಗರ ಸಂಚಾಲಕ ನರೇಶ್, ಶಿವು, ಚನ್ನಕೇಶವ ಹಾಜರಿದ್ದರು.

error: Content is protected !!