Home News ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

0
Dyavappanagudi Government School Uniform

Dyavappanagudi. Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬೈರಾರೆಡ್ಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳು ಸ್ಪರ್ಧೆ, ಪರೀಕ್ಷೆಗಳನ್ನು ಎದುರಿಸಲು ಭಯಪಡಬಾರದು. ಆತ್ಮವಿಶ್ವಾಸ, ಶಿಸ್ತು ರೂಢಿಸಿಕೊಂಡು ಸಮರ್ಥವಾಗಿ ಎದುರಿಸುವುದನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾಯುಗದಲ್ಲಿ ನಗರಪ್ರದೇಶದಲ್ಲಿ ಕಲಿತ ಮಕ್ಕಳೊಂದಿಗೆ ಉನ್ನತಶಿಕ್ಷಣ, ಉದ್ಯೋಗಗಳಿಗಾಗಿ ಎದುರಿಸುವುದು ಕಷ್ಟಕರವಾಗಿದೆ. ಮಕ್ಕಳಲ್ಲಿ ಸಮಯಪ್ರಜ್ಞೆ ಇರಬೇಕು. ಚಿಕ್ಕಂದಿನಿಂದಲೇ ಎಲ್ಲವನ್ನೂ ಆತ್ಮವಿಶ್ವಾಸದಿಂದ ಸಾಧಿಸಲು ಮುಂದಾಗಬೇಕು. ಉತ್ತಮ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ಧೆ ಮತ್ತು ನಿಷ್ಟೆಯಿಂದ ಕಲಿಯಬೇಕು. ಆಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಜಿ.ಎನ್.ವೆಂಕಟೇಶ್ ಮಾತನಾಡಿ, ಮಕ್ಕಳಲ್ಲಿ ಅಧ್ಯಯನಾಸಕ್ತಿ ಕ್ಷೀಣಿಸುತ್ತಿದೆ. ಮೌಲ್ಯಗಳು ಕುಸಿಯುತ್ತಿದ್ದು, ಪಠ್ಯದ ಜೊತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಬಲ್ಲ ಪುಸ್ತಕಗಳ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳು ಗುರು ಹಿರಿಯರಲ್ಲಿ ಗೌರವಾದರಗಳನ್ನು ತೋರುವ ಗುಣ ಬೆಳೆಸಿಕೊಳ್ಳಬೇಕು. ಪೋಷಕರೂ ಮಕ್ಕಳ ಕಲಿಕೆಯ ಕಡೆ ಹೆಚ್ಚು ಗಮನಹರಿಸಬೇಕು ಎಂದರು.

ಶಾಲಾವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

ಶಿಕ್ಷಕರಾದ ಜೀವಿಂದರ್‌ಕುಮಾರ್, ರಾಧಾಕೃಷ್ಣ, ಪವಿತ್ರಬಡಿಗೇರ, ಮಂಜುಳಾ, ಶೈಲಜಾ, ಮೆಹಬೂಬ್ ಪಾಶಾ, ಕ್ರೀಡಾಪಟು ನಾರಾಯಣಸ್ವಾಮಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version