ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಪಡಿತರ ಚೀಟಿ ಹೊಂದಿರುವ ಎಲ್ಲಾ ಸಾರ್ವಜನಿಕರು ತಪ್ಪದೆ ಇ-ಕೆವೈಸಿ ಮಾಡಿಸುವ ಕುರಿತು ಪ್ರಚಾರ ನಡೆಸುವ ಆಟೊಗೆ ತಾಲ್ಲೂಕು ಕಚೇರಿಯ ಬಳಿ ಚಾಲನೆ ನೀಡಿ ಶಿರಸ್ತೆದಾರ್ ಮಂಜುನಾಥ್ ಮಾತನಾಡಿದರು.
ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು, ಕುಟುಂಬದ ಸದಸ್ಯರು ಆಗಸ್ಟ್ 1 ರಿಂದ 10ರ ವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಬಹುದಾಗಿದೆ. ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಎಲ್ಲ ನ್ಯಾಯಬೆಲೆ ಅಂಗಡಿಕಾರರು ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ನಿಯೋಜಿಸಿದ ಎಲ್ಲ ಪಡಿತರ ಚೀಟಿದಾರರ ಗಮನಕ್ಕೆ ಈ ವಿಷಯವನ್ನು ಕಡ್ಡಾಯವಾಗಿ ತರಬೇಕು. ತಮ್ಮ ನ್ಯಾಯಬೆಲೆ ಅಂಗಡಿಗಳ ಮುಂದೆ ಈ ವಿಚಾರವನ್ನು ಪ್ರದರ್ಶಿಸಿ ಇ-ಕೆವೈಸಿ ಕಾರ್ಯವನ್ನು ನ್ಯಾಯಬೆಲೆ ಅಂಗಡಿಯ ಲಾಗಿನ್‌ನಲ್ಲಿ ಆಗಸ್ಟ್ 10 ರೊಳಗಾಗಿ ಪೂರ್ಣಗೊಳಿಸಬೇಕು ಎಂದರು.
ಆಹಾರ ನಿರೀಕ್ಷಕಿ ವೆಂಕಟಲಕ್ಷ್ಮಮ್ಮ, ನಗರ ಪಡಿತರ ಸಂಘದ ಅಧ್ಯಕ್ಷ ಬಿ.ಕೆ.ವೇಣು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi