![6AugSd02b Sidlaghatta Taluk E Timmasandra Grama Panchayat Election](https://www.sidlaghatta.com/wp-content/uploads/2023/08/6AugSd02b.jpg)
E Timmasandra, Sidlaghatta : ಶಿಡ್ಲಘಟ್ಟ ತಾಲ್ಲೂಕಿನ E ತಿಮ್ಮಸಂದ್ರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಾಗಮಣಿ ಬೈರಾರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.
ಒಟ್ಟು 16 ಸದಸ್ಯ ಬಲ ಹೊಂದಿರುವ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಶನಿವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ತಾ.ಪಂ ಇಓ ಜಿ.ಮುನಿರಾಜ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಜೆಡಿಎಸ್ ಹಿರಿಯ ಮುಖಂಡ ಶಿವಾರೆಡ್ಡಿ, ಟ.ವಿ.ಚೌಡರೆಡ್ಡಿ, ಜಡುಮಡಗಪ್ಪ, ಸೇರಿದಂತೆ ಗ್ರಾ.ಪಂ ಸದಸ್ಯರು ಹಾಜರಿದ್ದರು.