Home News ಈದ್ ಮಿಲಾದ್ ಹಬ್ಬ ಆಚರಣೆ

ಈದ್ ಮಿಲಾದ್ ಹಬ್ಬ ಆಚರಣೆ

0
Eid Milad Festival Celebration sidlaghatta

Sidlaghatta : ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ (Eid Milad Festival) ಹಬ್ಬವನ್ನು ಸಡಗರ ಸಂಭ್ರಮದಿಂದ ಮುಸ್ಲೀಮರು ಆಚರಿಸಿದರು.

ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಮರು ತಮ್ಮ ಮನೆಗಳಲ್ಲಿ ಹೋಳಿಗೆ, ಕಡುಬು ಹಾಗೂ ಇತರೆ ಸಿಹಿ ಪದಾರ್ಥ ತಯಾರಿಸಿ ಪರಸ್ಪರ ನೆರೆಹೊರೆಯವರಿಗೆ ಹಂಚುತ್ತಾರೆ. ಪ್ರಮುಖ ಮಸೀದಿ ಹಾಗೂ ದರ್ಗಾಗಳಲ್ಲಿ ದಾನಿಗಳು ಊಟ ಮಾಡಿಸುವುದು ಸಂಪ್ರದಾಯ. ಇಸ್ಲಾಮಿನ ರಬಿವುಲ್ ಅವ್ವಲ್ ತಿಂಗಳಲ್ಲಿ ಈ ಹಬ್ಬ ಬರುವ ಕಾರಣ ಒಂದು ತಿಂಗಳ ಕಾಲ ಮಸೀದಿಗಳಲ್ಲಿ ಮೌಲಿದ್ ಪಾರಾಯಣ (ಮುಹಮ್ಮದ್ ಫೈಗಂಬರ್ ಅವರ ಕೀರ್ತನೆ) ಮಾಡಲಾಗುತ್ತಿದೆ.

ಭಾನುವಾರ ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳನ್ನು ಹಾಗೂ ಹಲವು ಸ್ಥಳಗಳನ್ನು ಅಲಂಕರಿಸಲಾಗಿತ್ತು.

ಹಬ್ಬದ ನಿಮಿತ್ತ ಮುಸ್ಲಿ ಸಮಾಜದಿಂದ ಎಲ್ಲಾ ಬಡಾವಣೆಗಳ ಪ್ರಮುಖ ಮಸೀದಿಗಳಿಂದ ಮುಹಮ್ಮದ್ ಫೈಗಂಬರ್ ಅವರ ಜನ್ಮಸ್ಥಳ ಮೆಕ್ಕಾ ಹಾಗೂ ಇಸ್ಲಾಂ ಪ್ರಚಾರ ಅರಂಭಿಸಿದ ಮದೀನಾ ನಗರಗಳ ಸ್ಥಬ್ದ ಚಿತ್ರದ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಮುಹಮ್ಮದ ಅವರ ಕುರಿತ ನಾತೆ, ಕವ್ವಾಲಿಗಳು ಹಾಡಲಾಗುತ್ತಿತ್ತು.

ಮನೆಗಳಲ್ಲಿ ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು. ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು. ಮೆರವಣಿಗೆ ಹಾಗೂ ಸಾಮೂಹಿಕ ಪ್ರಾರ್ಥನೆಯನ್ನು ಈದ್ಗಾ ಮೈದಾನದಲ್ಲಿ ನಡೆಸಲಾಯಿತು.

“ಪ್ರವಾದಿ ಮುಹಮ್ಮದ್ ಅವರು ಬಡವರ ಹಾಗೂ ಹಸಿವೆ ಹೆಚ್ಚಿನ ಮಹತ್ವ ನೀಡಿದ ಕಾರಣ ಹಬ್ಬದಂದು ಅನ್ನ ಸಂತರ್ಪಣೆ ಮಾಡುವುದು ಸಂಪ್ರದಾಯ. ಉಳ್ಳವರು ಮಸೀದಿಗಳಲ್ಲಿ ಊಟ ಮಾಡಿಸುವುದು ಹಾಗೂ ಬಡವರಿಗೆ ಬಟ್ಟೆ, ನಗದು ದಾನ ಮಾಡುವ ಸಂಪ್ರದಾಯವೂ ಇದೆ. ಅವರ ಅನುಯಾಯಿ ಮುಸ್ಲಿಮರೆಲ್ಲರೂ ಈ ಸಂಪ್ರದಾಯ ಪಾಲನೆ ಮಾಡುತ್ತಾ ಬಂದಿದ್ದಾರೆ” ಎಂದು ಅಜಮಲ್ ಪಾಷ ತಿಳಿಸಿದರು.

“ಮಿಲಾದ್ ಅಂದರೆ ಹುಟ್ಟು, ಪ್ರವಾದಿ ಮುಹಮ್ಮದ್ ಅವರ ಹುಟ್ಟಿದ ದಿನವನ್ನು ಹಬ್ಬದ ಆಚರಣೆ ಮಾಡಲಾಗುತ್ತದೆ. ಮನೆ, ಮಸೀದಿಗಳ ಅಲಂಕಾರ ವಿಶೇಷವಾಗಿರುತ್ತದೆ. ಹೀಗಾಗಿ ಹಲವರು ಮದರಸಾಗಳ ಮಕ್ಕಳಿಗೆ ಹಾಗೂ ಬಡ ಜನರಿಗೆ ಬಟ್ಟೆದಾನ ಮಾಡಿದ್ದಾರೆ. ಹಬ್ಬದ ಆಚರಣೆಯ ಒಟ್ಟು ಉದ್ದೇಶ ಪರಸ್ಪರ ಸಹೋದರತೆ, ಪರಧರ್ಮ ಸಹಿಷ್ಣುತೆ, ಮಾನವೀಯ ಮೌಲ್ಯಗಳನ್ನು ತಿಳಿಸುವುದಾಗಿದೆ” ಎಂದು ಅವರು ಹೇಳಿದ

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version