News

ಶ್ರದ್ಧಾಭಕ್ತಿಯಿಂದ ವೈಕುಂಠ ಏಕಾದಶಿಯ ಆಚರಣೆ

Mallur Sainatha Gnana Mandir

ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿ ವೈಕುಂಠ ಏಕಾದಶಿ ಎಂಬ ವಿಶೇಷ ದಿನವೆಂದು ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ಶುಕ್ರವಾರ ವಿಶೇಷ ಪೂಜೆಗಳನ್ನು ಏರ್ಪಡಿಸಿದ್ದರು.

 ಕೆಲವು ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



 ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರ, ಚೌಡಸಂದ್ರದ ಸೋಮೇಶ್ವರಸ್ವಾಮಿ ದೇವಸ್ಥಾನ, ತಲಕಾಯಲಬೆಟ್ಟದ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯ, ಚಿಕ್ಕದಾಸರಹಳ್ಳಿ ಬಳಿಯ ಬ್ಯಾಟರಾಯಸ್ವಾಮಿ ದೇವಾಲಯ, ಜಂಗಮಕೋಟೆ ಬಳಿಯ ಮುತ್ಯಾಲಮ್ಮ ದೇವಸ್ಥಾನ, ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳನ್ನು ನಡೆಸಲಾಗಿತ್ತು.

 ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರದಲ್ಲಿ ಶುಕ್ರವಾರ ವೈಕುಂಠ ಏಕಾದಶಿಯ ಪ್ರಯುಕ್ತ ಸಪ್ತದ್ವಾರದ ವೈಕುಂಠವನ್ನೇ ಸೃಷ್ಟಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಿಂದ ಹಾಗೂ ವಿವಿಧ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ದೇವರ ದರ್ಶನವನ್ನು ಪಡೆದರು. ದೇವಾಲಯದ ಸೇವಾಕರ್ತರು ಶ್ವೇತವಸ್ತ್ರಧಾರಿಗಳಾಗಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಭಕ್ತರಿಗೆಲ್ಲ ಪ್ರಸಾದ ವಿನಿಯೋಗ ನಡೆಯಿತು. ಹೂವಿನಿಂದ ಅಲಂಕೃತಗೊಂಡ ಉಯ್ಯಾಲೆಯಲ್ಲಿ ವೆಂಕಟೇಶ್ವರ, ಶ್ರೀದೇವಿ, ಭೂದೇವಿಯ ಚಿನ್ನದ ಬಣ್ಣದ ವಿಗ್ರಹಗಳನ್ನಿಟ್ಟು ಭಕ್ತರು ತೂಗಲು ಅವಕಾಶ ಮಾಡಿಕೊಡಲಾಗಿತ್ತು. ವಿವಿಧ ಹೂಗಳಿಂದ ಅಲಂಕೃತಗೊಂಡ ವೈಕುಂಠದಲ್ಲಿ ವೆಂಕಟೇಶ್ವರ ಮತ್ತು ಲಕ್ಷ್ಮಿದೇವಿಯ ಬೃಹತ್ ಮೂರ್ತಿಗಳಿಗೆ ವಿಶೇಷ ಪೂಜೆ ನಡೆಯಿತು.

 “ವೈಕುಂಠ ಏಕಾದಶಿ ವಿಶೇಷ ದಿನ. ಈ ದಿನ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂದು ನಂಬಿಕೆಯಿದೆ. ವೈಕುಂಠ ಏಕಾದಶಿಯಂದು ವೈಕುಂಠದ(ಸ್ವರ್ಗದ) ಬಾಗಿಲು ತೆರೆದಿರುತ್ತದೆ. ಆದರಿಂದ ವೆಂಕಟೇಶ್ವರ ಅಥವಾ ವಿಷ್ಣುವಿನ ದರ್ಶನ ಪಡೆಯುವುದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆ ಭಕ್ತರಲ್ಲಿದೆ. “ವೆಂಕಟೇಶೋ ವಾಸುದೇವೋ ಪ್ರದ್ಯುಮ್ನೋ ಅಮಿತವಿಕ್ರಮಃ, ಸಂಕರ್ಷಣೋ ಅನಿರುದ್ಧಶ್ಚ ಶೇಶಾದ್ರಿಪತಿರೇವಚ” ಎಂದು ವೆಂಕಟೇಶ್ವರ ಸ್ತೋತ್ರವನ್ನು ಪಠಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತದೆ. ಸಪ್ತ ದ್ವಾರಗಳನ್ನು ದಾಟಿ ವೈಕುಂಠದಲ್ಲಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದು, ವಿಘ್ನೇಶ್ವರ, ಸಾಯಿಬಾಬ ಮತ್ತು ಅಯ್ಯಪ್ಪಸ್ವಾಮಿಯರ ದರ್ಶನವನ್ನು ಪಡೆದು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಈ ಪವಿತ್ರ ದಿನ ಎಲ್ಲರೂ ಪಾತ್ರರಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ” ಎಂದು ಶ್ರೀ ಸಾಯಿನಾಥ ಜ್ಞಾನಮಂದಿರ ದೇವಾಲಯ ಸಮಿತಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ತಿಳಿಸಿದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Sidlaghatta Bhatrenahalli Sainatha gnana mandira Gurupurnima

News

ಸಾಯಿನಾಥ ಜ್ಞಾನಮಂದಿರದಲ್ಲಿ ಗುರುಪೂರ್ಣಿಮೆ

Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಸಮೀಪದ ಸಾಯಿನಾಥ ಜ್ಞಾನಮಂದಿರದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ದೇವಾಲಯವನ್ನು…

Share
Sidlaghatta Guru Purnima Celebration

News

ಗುರುಪೂರ್ಣಿಮೆ ಆಚರಣೆ

Sidlaghatta : ಭಾನುವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆಯನ್ನು ನಡೆಸಲಾಯಿತು. ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ…

Share
sainath gnana mandira vijayadashami

News

ಸಾಯಿಬಾಬಾಗೆ ಮುತ್ತಿನ ಅಭಿಷೇಕ

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಭಟ್ರೇನಹಳ್ಳಿಯ ಶ್ರೀ ಸಾಯಿನಾಥ ಜ್ಞಾನ ಮಂದಿರದಲ್ಲಿ ಶುಕ್ರವಾರ ವಿಜಯದಶಮಿಯಂದು ಮುತ್ತಿನ ಅಭಿಷೇಕ ನಡೆಸಲಾಯಿತು. ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಶ್ರದ್ಧಾಭಕ್ತಿಯಿಂದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ಕವಿಗದ್ದಿಗೆ ಕಾರ್ಯಕ್ರಮ

ತಾಲ್ಲೂಕಿನ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಸಂಕ್ರಾತಿ ಕವಿಗದ್ದಿಗೆ ಕಾರ್ಯಕ್ರಮವನ್ನು ಜನವರಿ ೧೫ ರಂದು ಮಳ್ಳೂರು ಸಮೀಪದ ಸಾಯಿಬಾಬಾ ಜ್ಞಾನಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.…

Share