Home News ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ವಿವಿಧ ಸ್ಪರ್ಧೆ

ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ವಿವಿಧ ಸ್ಪರ್ಧೆ

0
Sidlaghatta Election Sport Taluk

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ 2021 ಸಂಬಂಧಿಸಿದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಮಾತನಾಡಿದರು.

ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವುದು, ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೀಜಿಸಲಾಗುತ್ತಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ತಿಳಿಸುತ್ತಾ ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸುವ ಅವರನ್ನು ಮಾನಸಿಕವಾಗಿ ಸಿದ್ಧಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಪ್ರಜಾಪ್ರಭುತ್ವದ ಬುನಾದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ನಾವೆಲ್ಲ ಪಾಲ್ಗೊಂಡಾಗ ಮಾತ್ರ ವ್ಯವಸ್ಥೆಯನ್ನು ಪ್ರಶ್ನಿಸುವಂತಹ ಹಕ್ಕು ನಮಗೆ ಲಭಿಸುತ್ತದೆ. ಆದ್ದರಿಂದ ವ್ಯವಸ್ಥೆಯನ್ನು ದೂರುವ ಬದಲು ನಮ್ಮಲ್ಲಿ ಮೊದಲು ಬದಲಾವಣೆ ತಂದುಕೊಂಡು ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಭಿತ್ತಿಪತ್ರ ಹಾಗೂ ಕೊಲಾಜ್ ತಯಾರಿಕೆ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಹೀಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

 ಇಸಿಒ ಭಾಸ್ಕರ ಗೌಡ ಮಾತನಾಡಿ, ರಾಷ್ಟ್ರದ ಪ್ರಗತಿ ಯುವಪೀಳಿಗೆಯ ಕೈಯಲ್ಲಿದೆ. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ತಪ್ಪದೇ ಮತಾದಾನ ಮಾಡಿ, ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಭಾರತದ ಸಂವಿಧಾನದ ಪ್ರಕಾರ ಚುನಾವಣಾ ಆಯೋಗವು18ವರ್ಷ ಮೇಲ್ಪಟ್ಟವರಿಗೆ ಮತದಾನದ ಅವಕಾಶವನ್ನು ನೀಡಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ, ನೆರೆಹೊರೆ, ಹಳ್ಳಿಗಳಲ್ಲಿ ಈ ಬಗ್ಗೆ ತಿಳಿಹೇಳಬೇಕು ಎಂದರು.  

ಮುಖ್ಯಶಿಕ್ಷಕ ರವಿಂದ್ರ, ತರಬೇತುದಾರ ಶಂಕರಪ್ಪ, ಶಿಕ್ಷಕರಾದ ಪ್ರಭಾಕರ್, ಶಂಕರಪ್ಪ, ರವಿಂದ್ರ, ನಾಗೇಶ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version