Home News ಸಾರ್ವಜನಿಕ ಆಸ್ಪತ್ರೆಯಲ್ಲಿ ಚುನಾವಣಾ ಜಾಗೃತಿ

ಸಾರ್ವಜನಿಕ ಆಸ್ಪತ್ರೆಯಲ್ಲಿ ಚುನಾವಣಾ ಜಾಗೃತಿ

0
Election Voting Awareness

Sidlaghatta : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ವೈದ್ಯರು ಮತ್ತು ಸಿಬ್ಬಂದಿ 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ಹಾಗೂ ಚುನಾವಣೆ ಪ್ರಾಮುಖ್ಯತೆ ಬಗ್ಗೆ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, “ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು. ಎಲ್ಲರೂ ಭಾಗವಹಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಹಾಗೂ ಉತ್ತಮ ನಾಯಕರನ್ನು ಆರಿಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ವೈದ್ಯ ಡಾ.ರಾಘವೇಂದ್ರ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ದೇವರಾಜ್, ತಾಲ್ಲೂಕು ಆರೋಗ್ಯ ಸುರಕ್ಷಣಾಧಿಕಾರಿ ಮುನಿರತ್ನಮ್ಮ, ಹಿರಿಯ ಫಾರ್ಮಸಿ ಅಧಿಕಾರಿ ಸುರೇಶ್, ನಂದಿನಿ, ಆಶಾ ಮೇಲ್ವಿಚಾರಕಿ ಗೀತಾ, ಅಪ್ರೋಜ್, ಲಲಿತಮ್ಮ, ಪ್ರಣತಿ, ಮಧು, ಚೈತ್ರ, ಸಮೀರಾ, ಶಿವಮ್ಮ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

Exit mobile version