ಸಮಾನ ವೇತನ ಮತ್ತು ಸೇವಾ ಭದ್ರತೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಸಾರ್ವಜನಿಕ ಆಸ್ಪತ್ರೆಯ ಮುಂದೆ ಶನಿವಾರ ಪ್ರತಿಭಟಿಸಿದರು.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸಂಘದ ಸದಸ್ಯೆ ಮಂಗಳಾ ಮಾತನಾಡಿ, “2019 ರ ಫೆಬ್ರುವರಿ ತಿಂಗಳಿನಲ್ಲಿ ನಾವುಗಳು ಪ್ರತಿಭಟನೆ ನಡೆಸಿ ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೆವು. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲಿಲ್ಲ. ಜೂನ್ ತಿಂಗಳಿನಲ್ಲಿ ನಾವು ಪ್ರತಿಭಟನೆಗೆ ಮುಂದಾದಾಗ, ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಭರವಸೆ ನೀಡಿದ್ದರು. ಮೂರು ತಿಂಗಳಾದರೂ ನಮಗೆ ಸಮಾನ ವೇತನ ಮತ್ತು ಸೇವಾ ಭದ್ರತೆ ನೀಡಿಲ್ಲ. ಅದಕ್ಕಾಗಿ ಸೆಪ್ಟೆಂಬರ್ 24 ರಿಂದ ನಾವುಗಳು ಕೆಲಸಕ್ಕೆ ಹಾಜರಾಗದೇ ಮನೆಯಲ್ಲಿಯೇ ಉಳಿದು ಪ್ರತಿಭಟಿಸುತ್ತಿದ್ದೇವೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಕೂರುತ್ತೇವೆ” ಎಂದು ಹೇಳಿದರು.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಾದ ಶ್ರೀನಿವಾಸ್, ಮಂಜುನಾಥ್, ಮನೋಹರ್, ನಾಗರಾಜ್, ನರಸಿಂಹಮೂರ್ತಿ, ಶಶಿಕುಮಾರ್, ಗಂಗಪ್ಪ, ಶಿವಪ್ಪ, ಬಾಲರಾಜು, ಮುನಿರತ್ನ, ಮಂಗಳಾ, ಪ್ರತಿಭಾ, ವಿಜಯಾ, ಮಮತಾ, ಚೈತ್ರಾ, ಭಾಗ್ಯಮ್ಮ ಹಾಜರಿದ್ದರು.
- Advertisement -
- Advertisement -
- Advertisement -
- Advertisement -