Home News ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ

ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ

0
Free Eye Testing Medical Camp Melur Sidlaghatta

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಪುವ್ವಾಡ ಫೌಂಡೇಷನ್, ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾಗೂ ಅಂಧತ್ವ ನಿವಾರಣಾ ವಿಭಾಗದ ಸಹಯೋಗದಲ್ಲಿ ಮಳ್ಳೂರಿನ ಆರೋಗ್ಯ ಸಹಕಾರ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಲ್ಲಶೆಟ್ಟಿ ಗೌರಮ್ಮ ಸ್ಮಾರಕ ನೇತ್ರ ತಪಸಣೆ, ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಕಣ್ಣಿನ ಪೊರೆ ಮತ್ತು ಇತರ ಕಣ್ಣಿನ ತೊಂದರೆಗಳಿಗೆ ಚಿಕಿತ್ಸೆಯ ಶಿಬಿರಕ್ಕೆ ಚಾಲನೆ ನೀಡಿ ಮಳ್ಳೂರಿನ ಪುವ್ವಾಡ ಫೌಂಡೇಷನ್ ನ ಗೌರವಾಧ್ಯಕ್ಷೆ  ಕಲಾವತಿ ವೀರಕುಮಾರ್ ಮಾತನಾಡಿದರು.

ಪ್ರತಿವರ್ಷ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬಂದಿದ್ದು, ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಆರೋಗ್ಯ ಶಿಬಿರಗಳನ್ನು ನಡೆಸಲು ಆಗಲಿಲ್ಲ. ತಾಲ್ಲೂಕಿನ ಗ್ರಾಮೀಣ ಭಾಗದ ಹಾಗೂ ಬಡ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದಾಗಿ ಅವರು ತಿಳಿಸಿದರು.

ಕಣ್ಣಿನ ಶಸ್ತ್ರಚಿಕಿತ್ಸೆ ಅಗತ್ಯವಿರುವವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನಮ್ಮದೇ ವಾಹನದಲ್ಲಿ ಕರೆದೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಶಸ್ತ್ರಚಿಕಿತ್ಸೆ ನಂತರ ಉಚಿತವಾಗಿ ಔಷದೋಪಚಾರ ಹಾಗೂ ಕಪ್ಪು ಕನ್ನಡಕವನ್ನು ನೀಡಿ ವಾಪಸ್ ಹಿಂದಿರುಗಲು ವಾಹನ ಸೌಲಭ್ಯ ಒದಗಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವವರಿಗೆ ಉಚಿತ ಊಟದ ವ್ಯವಸ್ಥೆ ಸಹ ಮಾಡಲಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಶಿಬಿರವನ್ನು ನಡೆಸುತ್ತಿರುವುದಾಗಿ ಅವರು ಹೇಳಿದರು.

ಸುಮಾರು 200 ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಕಣ್ಣಿನ ಚಿಕಿತ್ಸೆ ಪಡೆದರು. ಕಣ್ಣಿನ ಡ್ರಾಪ್ಸ್, ಕನ್ನಡಕಗಳನ್ನು ಅಗತ್ಯವಿರುವವರಿಗೆ ಉಚಿತವಾಗಿ ನೀಡಲಾಯಿತು. ಸುಮಾರು 70 ಮಂದಿ ಕಣ್ಣಿನ ಶಸ್ತ್ರಚಿಕಿತ್ಸೆಯ ಅಗತ್ಯವಿರುವವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version