ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಿತರಣೆ ಮಾಡುವ ಸಲುವಾಗಿ ಹಾಗೂ ಮಾಸ್ಕ್ ದಿನಾಚರಣೆ ಅಂಗವಾಗಿ ಗುರುವಾರ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಲಕ್ಷ್ಮೀನಾರಾಯಣರೆಡ್ಡಿ ಅವರು 2,500 ಮಾಸ್ಕ್ ಗಳನ್ನು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಅವರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಶ್ರೀನಿವಾಸ್ ಅವರಿಗೆ ಹಸ್ತಾಂತರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಅವರು ಮಾತನಾಡಿ, “ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇಲಾಖೆ ಹಾಗೂ ಸರ್ಕಾರ ನೀಡಿರುವ ಸೂಚನೆಗಳನ್ನೆಲ್ಲಾ ಪಾಲಿಸುತ್ತಿದ್ದೇವೆ. ದಾನಿಗಳು ಮಕ್ಕಳ ಸುರಕ್ಷತೆಗಾಗಿ ನೆರವನ್ನು ನೀಡಿ ಶಿಕ್ಷಣ ಇಲಾಖೆಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ” ಎಂದರು.
ಈ ಸಂದರ್ಭದಲ್ಲಿ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತ ಪ್ರಕಾಶ್, ಸಿ.ಆರ್.ಪಿ.ಗಳಾದ ನಾಗರಾಜು, ನರಸಿಂಹರಾಜು ಹಾಜರಿದ್ದರು.