ನಗರದ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ರೈತರು ಯಾವ ಬೆಳೆ ಬೆಳೆದಿದ್ದಾರೆ ಅದರ ನಿಖರ ಮಾಹಿತಿಯನ್ನು ಅಪಡೇಟ್ ಮಾಡಲು ಸರ್ಕಾರ ಆಪ್ ಪರಿಚಯಿಸಿದ್ದು ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಸಹಕರಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಕೋರಿದರು.
2020-21 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲಾದ್ಯಂತ ಆಗಸ್ಟ್ 11 ರಿಂದ ಆರಂಭವಾಗಿದ್ದು, ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ದಾಖಲಿಸಲು “ರೈತರ ಬೆಳೆ ಸಮೀಕ್ಷೆ” ಎಂಬ ಹೆಸರಿನ ಮೊಬೈಲ್ ಆಪ್‌ನ್ನು ಗೋಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.
ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ, ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಮೊಬೈಲ್ ಆಪ್‌ಅನ್ನು ಡೌನ್‌ಲೋಡ್ ಮಾಡಿಕೊಂಡು ಬಳಿಕ ರೈತರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಓಟಿಪಿ ಸಂಖ್ಯೆಯನ್ನು ನಮೂದಿಸಿ ರೈತರು ತಮ್ಮ ನೋಂದಣಿ ಮಾಡಿಕೊಳ್ಳಬೇಕು ಎಂದರು.
ಮೊಬೈಲ್ ಆಪ್‌ನಲ್ಲಿ
- ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ನಂತರ
- ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆಪ್‌ಗೆ ಸೇರಿಸಿಕೊಂಡು ಮುಂದಿನ ಹಂತದಲ್ಲಿ
- ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ, ಹೊಂಡ,ಮನೆ ಇತರೆ) ಬಳಕೆಯಾದ ಪ್ರದೇಶ ವಿವರಗಳನ್ನು ಸಹಾ ದಾಖಲಿಸುವ ಜೊತೆಗೆ ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ 20 ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕಾಗಿರುತ್ತದೆ ಎಂದರು.
ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಸ್ವತಃ ತಮ್ಮ ಬೆಳೆ ವಿವರಗಳನ್ನು ಆಗಸ್ಟ್ 24 ರೊಳಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ ಹಾಗೂ ವಿವಿಧ ಕಂದಾಯ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಹಾಜರಿದ್ದರು.
ಮೊಬೈಲ್ ಆಪ್ ಇಲ್ಲಿ Download ಮಾಡಬಹುದು
https://play.google.com/store/apps/details?id=com.csk.KariffTPKfarmer.cropsurvey
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi







