Home News ರೈತ ಹುತಾತ್ಮ ದಿನಾಚರಣೆಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಹೊರಟ ರೈತರು

ರೈತ ಹುತಾತ್ಮ ದಿನಾಚರಣೆಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಹೊರಟ ರೈತರು

0
Farmers Protest Sidlaghatta

ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಬೆಳಗಾವಿಯ ಯರಗಟ್ಟಿ ನಗರದಲ್ಲಿ ಜುಲೈ 21 ರ ಬುಧವಾರ ಆಯೋಜಿಸಲಾಗಿರುವ ಬೃಹತ್ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರದ ರೈತ ಸಂಘದ ಕಚೇರಿಯ ಮುಂಭಾಗದಿಂದ ಮಂಗಳವಾರ ಹೊರಟ ರೈತ ಮುಖಂಡರನ್ನು ಉದ್ದೇಶಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳು ಸೇರಿದಂತೆ ರಾಜ್ಯ ಸರ್ಕಾರದ ಭೂ ಸುದಾರಣೆ, ವಿದ್ಯುತ್ ಹಾಗೂ ಎಪಿಎಂಸಿ ಕಾಯಿದೆಗಳ ಸೇರಿದಂತೆ ಭಾಗದ ರೈತರ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಮುಂಗಾರು ಮಳೆಗಳು ಶುರುವಾಗಿದೆ. ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾದ ಸಮಯವಿದು. ನಮ್ಮ ರೈತರಿಗೆ ತೊಂದರೆಯಾಗದಂತೆ ಅವರಿಗೆ ಅಗತ್ಯ ಪರಿಕರಗಳು ಹಾಗೂ ಬೇಸಾಯಗಳು ಸಮಯಕ್ಕೆ ಸರಿಯಾಗಿ ಸಿಗುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ಪದಾರ್ಥಗಳ ಏರಿಕೆಯಾಗಿ ರೈತರ ಪರಿಕರಗಳು, ಬೆಳೆದ ಉತ್ಪನ್ನಗಳಾದ ಹೂವು, ತರಕಾರಿ, ಹಣ್ಣುಗಳ ಸಾಗಾಣಿಕೆ ವೆಚ್ಚ, ಭೂಮಿ ಉಳುವ ಟ್ರ್ಯಾಕ್ಟರ್ ಗಳ ವೆಚ್ಚ ಹೊರೆಯಾಗುತ್ತಿದ್ದು ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿವೆ. ಅದರಲ್ಲಿ ಸ್ಪರ್ಧಿಸುವಂತೆ ರಾಜ್ಯ ಸಮಿತಿ ಆದೇಶಿಸಿದ್ದು, ಈ ಬಗ್ಗೆ ಸಮಾಲೋಚನೆ ನಡೆಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ರೈತ ಮುಖಂಡರಾದ ಸುರೇಶ, ಕೆಂಪಣ್ಣ, ಬಸವರಾಜ್, ಸುಬ್ರಮಣಿ, ದೇವರಾಜ್, ನಾಗರಾಜ, ಮುನಿರಾಜು, ಮಂಜುನಾಥ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version