ಅರಣ್ಯ ಇಲಾಖೆ ಕಚೇರಿ ಮುಂಭಾಗ ದಸಂಸ ಪದಾಧಿಕಾರಿಗಳ ಧರಣಿ

- Advertisement -
- Advertisement -

Sidlaghatta : ರೈತರನ್ನು ಒಕ್ಕಲೆಬ್ಬಿಸಿ ವಿನಾಕಾರಣ ಕಿರುಕುಳ ಹಾಗೂ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಚಿಕ್ಕಬಳ್ಳಾಪುರ ತಹಶೀಲ್ದಾರ್ ಸೇರಿದಂತೆ ಡಿ.ಎಫ್‌.ಓ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ಒತ್ತಾಯಿಸಿದರು.

ಜಿಲ್ಲೆಯ ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಬಳಿಯ ದಲಿತರ ಜಮೀನುಗಳನ್ನು ಅರಣ್ಯ ಇಲಾಖೆಯಿಂದ ರಕ್ಷಿಸಲು ಒತ್ತಾಯಿಸಿ ನಗರದ ಹೊರವಲಯದ ಅರಣ್ಯ ಇಲಾಖೆ ಕಚೇರಿ ಮುಂಭಾಗ ಸೋಮವಾರ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಾಂಕೇತಿಕ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಬಳಿ 1995 ರಲ್ಲೇ 7 ಮಂದಿ ದಲಿತ ಕುಟುಂಬಗಳಿಗೆ ಸರ್ಕಾರಿ ಜಮೀನು ಮಂಜೂರು ಆಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಡೀಮ್ಡ್ ಫಾರೆಸ್ಟ್ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಿ ವಿನಾಕಾರಣ ಕಿರುಕುಳ ನೀಡುತ್ತಿದ್ದು ರೈತ, ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ.

ಮಂಜೂರಾದ ಭೂಮಿ ನಮ್ಮದು ಎಂದು ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಹಿಂದೆ ಇದು ಅರಣ್ಯ ಇಲಾಖೆಗೆ ಸೇರಿಲ್ಲ. ಕಂದಾಯ ಇಲಾಖೆಗೆ ಸೇರಿದ್ದು ಎಂದು ಹೇಳಿದರೆ, ಇನ್ನೊಮ್ಮೆ ಇದು ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ.

ಅರಣ್ಯ ಇಲಾಖೆಯ ಸೆಟ್ಲಮೆಂಟ್ ಅಧಿಕಾರಿಗಳಿಂದಲೂ ಈ 21 ಎಕರೆ ಜಮೀನು 7 ಮಂದಿ ದಲಿತ ಕುಟುಂಬಗಳಿಗೆ ಸೇರಿದ್ದು ಎಂದು ತೀರ್ಪು ನೀಡಿದ್ದರೂ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ತಮ್ಮ ತಮ್ಮಲ್ಲಿ ಒಮ್ಮತವಿಲ್ಲದೆ ವಿನಾಕಾರಣ ದಲಿತ ರೈತ ಕುಟುಂಬಗಳಿಗೆ ತೊಂದರೆ ಕೊಡುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ 7 ಜನ ದಲಿತರ ಭೂಮಿಗಳ ದುರಸ್ತಿಯನ್ನು ತಕ್ಷಣವೇ ಮಾಡಿಸಿ ಭೂಮಿ ಬಿಟ್ಟುಕೊಡಬೇಕು. ಹಾಗೂ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ತಹಶೀಲ್ದಾರ್ ಸೇರಿದಂತೆ ಡಿ.ಎಫ್‌.ಓ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಲಯ ಅರಣ್ಯಾಧಿಕಾರಿ ರಾಜೇಶ್ ಗವಾಲ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಚಾಲಕ ದೊಡ್ಡತಿರುಮಳಯ್ಯ, ಸಂಘಟನಾ ಸಂಚಾಲಕರಾದ ನರೇಶ್, ರಾಜಕುಮಾರ್, ದೇವಪ್ಪ, ಡಿ.ಎಂ.ವೆಂಕಟೇಶ್, ಗಂಗಾಧರ್, ಮುನಿಕದಿರಪ್ಪ, ಮಹಿಳಾ ಘಟಕದ ಅರಣಾ, ಭಾರತಮ್ಮ, ದೇವರಾಜಮ್ಮ, ವೀಣಾ, ಗಂಗರತ್ನಮ್ಮ, ಅಮರಾವತಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!