ಅರಣ್ಯ ಇಲಾಖೆಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ‌ ಚಿನ್ನದ ಪದಕ

Chief Minister of Karnataka Service Honorary Medal Shreekalshmi Forest Department Sidlaghattap

ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಯಾಗಿದ್ದ ಎಚ್.ಎಸ್.ಶ್ರೀಲಕ್ಷ್ಮಿ ಅವರಿಗೆ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಘೋಷಿಸಲಾಗುವ ಮುಖ್ಯಮಂತ್ರಿಗಳ‌ ಚಿನ್ನದ ಪದಕವನ್ನು ಸೋಮವಾರ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಪಡೆದರು.

ವಲಯ ಅರಣ್ಯಾಧಿಕಾರಿ ಎಚ್.ಎಸ್.ಶ್ರೀಲಕ್ಷ್ಮಿ ಅವರೊಂದಿಗೆ ಶಿಡ್ಲಘಟ್ಟ ಅರಣ್ಯ ರಕ್ಷಕ ಟಿ.ಡಿ.ಸಂದೀಪ್ ಮತ್ತು ಅರಣ್ಯ ಕ್ಷೇಮಾಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಮುಖ್ಯಮಂತ್ರಿಗಳ ಗೌರವಕ್ಕೆ ಪಾತ್ರರಾದರು.

ಅರಣ್ಯಾಧಿಕಾರಿ ಎಚ್.ಎಸ್.ಶ್ರೀಲಕ್ಷ್ಮಿ

ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ವಲಯ ಅರಣ್ಯಾಧಿಕಾರಿ ಎಚ್.ಎಸ್.ಶ್ರೀಲಕ್ಷ್ಮಿ ಅವರು ತಮ್ಮ ಕೆಲವೇ ಸಿಬ್ಬಂದಿಯೊಂದಿಗೆ ತಾಲ್ಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10 ರ ಅರಣ್ಯ ಭೂಮಿಯನ್ನು ರಾತ್ರೋ ರಾತ್ರಿ ಉಳಲು ಬಂದವರನ್ನು ಗಟ್ಟಿತನದಿಂದ ಎದುರಿಸಿದ್ದರು. ಹಲವು ಮುಖಂಡರಿಂದ ಬೆದರಿಕೆ ಕರೆಗಳು ಬಂದರೂ ಜಗ್ಗದೆ ಒಂದಿಂಚೂ ಅರಣ್ಯ ಜಮೀನನ್ನು ಬಿಡುವುದಿಲ್ಲ ಎಂದು ಹಠತೊಟ್ಟು ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯಿಂದ ಅಲ್ಲಿ ಗಿಡಗಳನ್ನು ನೆಡುವಲ್ಲಿ ಯಶಸ್ವಿಯಾಗಿದ್ದರು. ಅವರ ಪರಿಶ್ರಮ, ಸೇವಾಕ್ಷಮತೆಯನ್ನು ಪಿ.ಸಿ.ಸಿ.ಎಫ್ ಪುನ್ನತಿ ಶ್ರೀಧರ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ಲಾಘಿಸಿದ್ದರು.

ಅರಣ್ಯ ರಕ್ಷಕ ಟಿ.ಡಿ.ಸಂದೀಪ್ ಮತ್ತು ಅರಣ್ಯ ಕ್ಷೇಮಾಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಅವರು ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10 ರ 25 ಹೆಕ್ಟೇರ್ ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯದಲ್ಲಿ ಸಕ್ಷಮವಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಅರಣ್ಯದಲ್ಲಿ ಅಪಘಾತಕ್ಕೀಡಾದ ಜಿಂಕೆಗಳನ್ನು ರಕ್ಷಿಸಿರುವುದಲ್ಲದೆ, ಅರಣ್ಯ ಒತ್ತುವರಿಗಳಿಗೆ ಸಂಬಂಧಿಸಿದಂತೆ ವಿಚಾರಣಾ ವರದಿಗಳನ್ನು ಅವರು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!