ತಾಲ್ಲೂಕಿನ ವಿವಿದೆಡೆ ಅರಣ್ಯಭೂಮಿಯನ್ನು ನಿರಾತಂಕವಾಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಅಡೆತಡೆಯಾಗಲೀ ನಿಲ್ಲಿಸುವುದಾಗಲೀ ಅರಣ್ಯ ಇಲಾಖೆಯವರು ಮಾಡುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ತಾಲ್ಲೂಕಿನ ಪೂಲಕುಂಟಹಳ್ಳಿಯ ಹಕ್ಕಿಪಿಕ್ಕಿ ಕಾಲೋನಿಯ ಬಳಿ ಜೆಸಿಬಿ ಬಳಸಿ ಅರಣ್ಯ ಭೂಮಿಯಲ್ಲಿ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದಾರೆಯೇ, ಇದ್ದರೂ ಕೆಲಸ ಮಾಡುತ್ತಿರುವರೇ ಎಂದು ಅನೇಕರು ಪ್ರಶ್ನಿಸಿದ್ದಾರೆ. ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಎ.ನಕ್ಕಲಹಳ್ಳಿಯ ಅರಣ್ಯ ಪ್ರದೇಶದಲ್ಲಿ ಸುಮಾರು 150 ಎಕರೆಯಷ್ಟು ಒತ್ತುವರಿ ಆಗಿದೆ. ಅಜ್ಜಕದಿರೇನಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಒತ್ತುವರಿ ನಿರಾತಂಕವಾಗಿ ಸಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅರಣ್ಯ ಪ್ರದೇಶವನ್ನು ಉಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi