27.1 C
Sidlaghatta
Monday, July 14, 2025

ವ್ಯಸನಮುಕ್ತರಾದವರಿಗೆ ಗೌರವ

- Advertisement -
- Advertisement -

ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಗಾಂಧೀಜಿ ಅವರು ಸರಳ ಬದುಕಿನಿಂದ ಭಗವಂತನನ್ನು ಕಾಣಬಹುದು ಎಂಬುದನ್ನು ತಮ್ಮ ಆದರ್ಶಮಯ ಬದುಕಿನ ಮೂಲಕ ತಿಳಿಸಿಕೊಟ್ಟಿದ್ದಾರೆ. ಈ ಸಂದೇಶವನ್ನು ಪ್ರಸ್ತುತ ಸಮಾಜದಲ್ಲಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಮದ್ಯವರ್ಜನ ಶಿಬಿರಗಳನ್ನು ನಡೆಸುವ ಮೂಲಕ ಹಲವು ಕುಟುಂಬಗಳಿಗೆ ನೆರವಾಗುತ್ತಿದ್ದಾರೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಕ್ರಾಸ್ ನಲ್ಲಿರುವ ಎಸ್.ಎಲ್.ವಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಮಾನವ ಹಕ್ಕುಗಳ ಕಮಿಟಿ ಸಹಯೋಗದಲ್ಲಿ 152 ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಿದ್ದ “ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ  ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದಾರೆ. ಪ್ರೀತಿಯಿಂದ ಈ ವ್ಯಸನಿಗಳನ್ನು ತಮ್ಮ ಮಾತು ಕೇಳುವಂತೆ ಮಾಡಿ ಅದರ ಸೇವನೆಯಿಂದಾಗುವ ಕೆಡಕನ್ನು ಅವರಿಗೆ ಮನದಟ್ಟು ಮಾಡಿ ಕೆಟ್ಟ ಚಟವನ್ನು ಬಿಡುವಂತೆ ಮನವರಿಕೆ ಮಾಡುವ ಕೆಲಸದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಸ ಮಾಡುತ್ತಿರುವುದರಿಂದ ಸಮಾಜಕ್ಕೆ ಬಹಳ ಉಪಯೋಗವಾಗುತ್ತಿದೆ ಎಂದರು.

 ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಯಲುವಳ್ಳಿ ರಮೇಶ್ ಮಾತನಾಡಿ, ಅಗೌರವಯುತ ಬಾಳು ದಕ್ಷತೆಗೆ ಕುಂದು ಮತ್ತು ದೇಶದ ಗೌರವಕ್ಕೆ ಚ್ಯುತಿ ತರುತ್ತದೆ. ಇದಕ್ಕೆ ದಾಸನಾದವನು ತನ್ನ ಮತ್ತು ಸಂಸಾರದ ಮಾನ ಮರ್ಯಾದೆಯನ್ನು  ಬೀದಿ ಬೀದಿಗಳಲ್ಲಿ ಹರಾಜು ಹಾಕುತ್ತಾನೆ. “ಕುಡಿತ ಎನ್ನುವುದು ದುರಾಚಾರ ಎನ್ನುವುದಕ್ಕಿಂತಲೂ ಹೆಚ್ಚಾಗಿ ಅದನ್ನು ಕಾಯಿಲೆ ಎಂದು ಕರೆಯಬಹುದು. ನಾನು ನನ್ನನ್ನು ಶ್ರಮಿಕರ ಜತೆಯಲ್ಲಿ ಗುರುತಿಸಿಕೊಂಡಿರುವುದರಿಂದ ಕುಡಿತದ ಚಟಕ್ಕೆ ಅಂಟಿಕೊಂಡಿರುವ ಶ್ರಮಿಕರ ಮನೆಗಳಿಗೆ ಕುಡಿತವು ಎಂತಹ ಹಾನಿಯನ್ನುಂಟು ಮಾಡಿದೆ ಎಂದು ನನಗೆ ಗೊತ್ತಿದೆ. ಆರ್ಥಿಕ ನಷ್ಟಕ್ಕಿಂತ ಯಾವಾಗಲೂ ನೈತಿಕ ನಷ್ಟ ಹೆಚ್ಚಿನದು” ಎಂಬುದು ಗಾಂಧೀಜಿಯವರ ವಾದ ಎಂದು ಅವರು ಹೇಳಿದರು.

 ಗ್ರಾಮ ಪಂಚಾಯಿತಿ ಸದಸ್ಯ ಬೆಳ್ಳೂಟಿ ಸಂತೋಷ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿರವರ ಜಯಂತಿಯಂದು ಈ ಕಾರ್ಯಕ್ರಮ ಮಾಡುತ್ತೀರುವುದು ಶ್ಲಾಘನೀಯ. ಧರ್ಮಸ್ಥಳ ಸಂಘದ ವತಿಯಿಂದ ಹಲವಾರು ಜನಪರ ಕಾರ್ಯಕ್ರಮ ಮಾಡುತ್ತಿದ್ದಾರೆ. ವ್ಯಸನಮುಕ್ತ ಮಾಡುವ ಕಾರ್ಯಕ್ರಮ ಬಹಳ ಉಪಯುಕ್ತರವಾಗಿದೆ ಎಂದು ಹೇಳಿದರು.

 ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷ ಬಿ.ಆರ್.ನರಸಿಂಹನಾಯ್ಡು, ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್, ಎಪಿಎಂಸಿ ನಿರ್ದೇಶಕ ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ವಿಜಯೇಂದ್ರ, ಜಿಲ್ಲಾ ಜನಜಾಗೃತಿ ಸದಸ್ಯರಾದ ವೆಂಕಟಸ್ವಾಮಿರೆಡ್ಡಿ, ಎ.ಎಂ.ತ್ಯಾಗರಾಜ್, ಕೆ.ಪ್ರಭಾ ನಾರಾಯಣಗೌಡ, ಸುರೇಶ್, ಕೆ.ಎಂ.ನಾಗರಾಜು, ಸಿ.ಎಂ.ಕುಪೇಂದ್ರಪ್ಪ, ವಿ.ಮಂಜುನಾಥ್, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!