Home News ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ನಿಧನ

0
Freedom Fighter Sidlaghatta Mallur Nagappa Demise

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ (100) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ತಾಲ್ಲೂಕು ಆಡಳಿತದ ಪರವಾಗಿ ಕಂದಾಯ ಇಲಾಖೆ ಅಧಿಕಾರಿಗಳು ಮೃತರಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಶಾಸಕ ವಿ.ಮುನಿಯಪ್ಪ, ಜೆಡಿಎಸ್ ಮುಖಂಡ ಬಿ.ಎನ್.ಸಚಿನ್, ಸಮಾಜಸೇವಕ ಆಂಜಿನಪ್ಪ ಪುಟ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ತಹಸೀಲ್ದಾರ್ ಬಿ.ಎನ್.ಸ್ವಾಮಿ ಸೇರಿದಂತೆ ವಿವಿಧ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

ಅಪಾರ ಬಂಧು ಬಳಗದ ಸಾಕ್ಷಿಯಲ್ಲಿ ಸ್ವಗ್ರಾಮ ಮಳ್ಳೂರಿನ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ಪೂರೈಸಲಾಯಿತು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version