
Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ತಹಶೀಲ್ದಾರ್ ಗಗನಸಿಂಧು ಸೇರಿದಂತೆ ಅಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ನಂತರ ಮಾತನಾಡಿದ ತಹಶೀಲ್ದಾರ್ ಗಗನಸಿಂಧು, ಮಹಾತ್ಮ ಗಾಂಧೀಜಿ ಅವರು ಸತ್ಯ, ಅಹಿಂಸೆ ಹಾಗೂ ಶಾಂತಿಯ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಅವರ ಸರಳ ಜೀವನ, ಉನ್ನತ ಆದರ್ಶಗಳು ಇಂದಿಗೂ ಎಲ್ಲರಿಗೂ ಮಾದರಿಯಾಗಿವೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಾಮಾಣಿಕತೆ, ಶಿಸ್ತು ಹಾಗೂ ಸರಳತೆಗೆ ಹೆಸರಾದ ನಾಯಕರಾಗಿದ್ದರು. ಅವರ ದೇಶಪ್ರೇಮ ಮತ್ತು ಕರ್ತವ್ಯನಿಷ್ಠೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತೆ ಜಿ. ಅಮೃತ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು.
In English: Mahatma Gandhi Jayanti and the birth anniversary of former Prime Minister Lal Bahadur Shastri were observed in a simple manner at the Sidlaghatta taluk office on Friday, because the model code of conduct for the Legislative Council election is in force. Tahsildar Gaganasindhu and other officials paid floral tributes to their portraits; Municipal Commissioner G. Amrutha and officials of the Agriculture and Sericulture departments were present.