26.4 C
Sidlaghatta
Saturday, October 11, 2025

ಬೃಹತ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

- Advertisement -
- Advertisement -

Ganjigunte, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ, ಗಂಜಿಗುಂಟೆ ಗ್ರಾಮ ಪಂಚಾಯಿತಿ, ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎಂವಿಜೆ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಶಾಸಕ ಬಿ.ಎನ್.ರವಿಕುಮಾರ್ ಅವರು ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯ ಬಡವರಿಗೆ ಅದರಲ್ಲೂ ಗ್ರಾಮೀಣರಿಗೆ ದುಬಾರಿಯಾಗಿ ಪರಿಣಮಿಸಿದೆ. ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ನೀಡಿ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದರೂ ಸಹ ಹಳ್ಳಿಗಳ ಬಹುತೇಕ ಮಂದಿಗೆ ನಾನಾ ಕಾರಣಗಳಿಗಾಗಿ ಆರೋಗ್ಯ ಸೌಲಭ್ಯಗಳು ಸೂಕ್ತ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನಮ್ಮ ಎಲ್ಲರ ಬದುಕಿನಲ್ಲೂ ಆರೋಗ್ಯ ಎನ್ನುವುದು ಬಹಳ ಮುಖ್ಯ. ಆರೋಗ್ಯ ಉತ್ತಮವಾಗಿದ್ದರೆ ಏನನ್ನಾದರೂ ಸಾಧಿಸಬಹುದು. ಹಾಗಾಗಿ ಎಲ್ಲ ವಯೋಮಾನದವರೂ ಕೂಡ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿರಂತರ ಪ್ರಯತ್ನ ನಡೆಸಬೇಕೆಂದರು.

ಯಾರೇ ಆಗಲಿ ಯಾವುದೇ ಹಂತದಲ್ಲಾಗಲಿ ಆರೋಗ್ಯವನ್ನು ನಿರ್ಲಕ್ಷಿಸಬಾರದು, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿಕೊಂಡು ಎದುರಾಗಬಹುದಾದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೆ ನಿವಾರಣೆ ಮಾಡಿಕೊಳ್ಳಬಹುದು.

ಇದರಿಂದ ಹಣ ಸಮಯ ಅಮೂಲ್ಯವಾದ ಜೀವವನ್ನು ಉಳಿಸುವ ಪ್ರಯತ್ನ ಮಾಡಬಹುದು. ನಾನು ನನ್ನ ಅಧಿಕಾರದ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಲಿದ್ದೇನೆ. ಅದಕ್ಕಾಗಿ ಕ್ಷೇತ್ರದ ಎಲ್ಲ ಜನತೆ, ಅಧಿಕಾರಿಗಳ ಸಹಕಾರ ಬೇಕೆಂದು ಮನವಿ ಮಾಡಿದರು.

ವೈದ್ಯಕೀಯ ತಜ್ಞರು, ಕಣ್ಣು, ಮೂಳೆ, ಸ್ತ್ರೀರೋಗ, ಚರ್ಮರೋಗ, ಮಕ್ಕಳು, ಶಸ್ತ್ರ ಚಿಕಿತ್ಸಾ, ಕಿವಿ ಮೂಗು ಗಂಟಲು, ಮಾನಸಿಕ ತಜ್ಞರು ಶಿಬಿರದಲ್ಲಿ ತಪಾಸಣೆ ನಡೆಸಿ ಔಷಧ ವಿತರಿಸಿ ಸಲಹೆ ಸೂಚನೆ ನೀಡಿದರು. ಗಂಜಿಗುಂಟೆ ಗ್ರಾಮ ಪಂಚಾಯಿತಿಯ ಸುತ್ತಲ ಮುತ್ತಲ ಗ್ರಾಮಗಳಿಂದ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಗಂಜಿಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಎಂವಿಜೆ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಮೋದ್, ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅವಿನಾಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಮುಖಂಡರಾದ ರಘುನಾಥರೆಡ್ಡಿ, ಬಂಕ್ ಮುನಿಯಪ್ಪ, ತಾದೂರು ರಘು, ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ ಹಾಜರಿದ್ದರು.

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!