Sidlaghatta : ಶಿಕ್ಷಣದ ಮೂಲಕವೇ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯವಾಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಡಾ.ಬಿ.ಆರ್.ಜ್ಞಾನ ಅಕಾಡೆಮಿಯ ಅಧ್ಯಕ್ಷ ಡಿ. ರವಿಕುಮಾರ್ ಹೇಳಿದರು.
ಮಳ್ಳೂರು ಗ್ರಾಮದ ಡಾ. ಅಂಬೇಡ್ಕರ್ ಭವನದಲ್ಲಿ ರಾತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಅಕಾಡೆಮಿಯ ವತಿಯಿಂದ ಶಾಲಾ ಬ್ಯಾಗ್, ನೋಟ್‌ಪುಸ್ತಕ, ಚಪ್ಪಲಿ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಶಿಕ್ಷಕಿಯನ್ನು ನೇಮಿಸಿ ವೇತನ, ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಅಕಾಡೆಮಿಯೇ ಒದಗಿಸುತ್ತಿದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುನಿಯಪ್ಪ ಮಾತನಾಡಿ, ಮಕ್ಕಳಿಗೆ ಆಸ್ತಿಗಿಂತ ಶಿಕ್ಷಣ ನೀಡುವುದು ಮುಖ್ಯ. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.
ವೆಂಕಟರೋಣಪ್ಪ, ವಕೀಲ ಎನ್. ಅಶೋಕ್, ಮೂರ್ತಿ, ಕುಮಾರ್, ನಾರಾಯಣಸ್ವಾಮಿ, ಪವನ್, ರಾಜೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.








