Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಶಿವಪ್ರಸಾದ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳನ್ನು ಸಾಮಾನ್ಯ ರೋಗಿಗಳಂತೆ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಆನಂತರ ಲೋಕಾಯುಕ್ತ ಇನ್ಸ್ಪೆಕ್ಟರ್ ಶಿವಪ್ರಸಾದ್ ತಮ್ಮ ಸಿಬ್ಬಂದಿಯೊಡನೆ ಭೇಟಿ ನೀಡಿ ರೋಗಿಗಳ ಆಹವಾಲುಗಳನ್ನು ಆಲಿಸಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಲೋಕಾಯುಕ್ತ ಇನ್ಸ್ಪೆಕ್ಟರ್ ಆಸ್ಪತ್ರೆಯ ಮಹಿಳಾ ವಾರ್ಡಿಗೆ ಭೇಟಿ ನೀಡಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯರೊಂದಿಗೆ ಸಮಾಲೋಚನೆ ನಡೆಸಿದರು.
ಇದೆ ವೇಳೆ ಆಸ್ಪತ್ರೆಯ ವ್ಯವಸ್ಥೆಗಳನ್ನು ಪರಿಶೀಲಿಸಿ ಇಬ್ಬರು ವೈದ್ಯರು ಗೈರು ಹಾಜರಿ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸುಧಾರಿಸಿಕೊಳ್ಳಲು ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ್, ಲೋಕಾಯುಕ್ತ ಜಿಲ್ಲಾ ಕಚೇರಿಯ ಸಿಬ್ಬಂದಿಗಳಾದ ಗುರುಮೂರ್ತಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
