ಶಿಡ್ಲಘಟ್ಟ ತಾಲ್ಲೂಕು ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಭೆ

- Advertisement -
- Advertisement -

ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ತಾಲ್ಲೂಕು ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಸಭೆ ಸೇರಿ ಮುಷ್ಕರದ ರೂಪುರೇಶೆಗಳನ್ನು ಚರ್ಚಿಸಿದರು.

 ರಾಜ್ಯಮಟ್ಟದಲ್ಲಿ ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸುಮಾರು 120 ಕ್ಕೂ ಹೆಚ್ಚು ನೌಕರರು ಕರ್ತವ್ಯ  ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ.

 “ನೌಕರರು 15 ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಕೊರೊನದಂತಹ ಮಾರಣಾಂತಿಕ ಸಂದರ್ಭದಲ್ಲೂ ಆರೋಗ್ಯ ಸೇವೆಯನ್ನು ಮಾಡುತ್ತಲೇ ಬಂದಿದ್ದರೂ ಸರ್ಕಾರವು ನಮಗೆ ಕೊಡಬೇಕಾದ ಸೌಲಭ್ಯಗಳನ್ನು ನೀಡಿ ಇರುವುದಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನೌಕರರ ಬದುಕು ಅತಂತ್ರವಾಗಿದೆ. ಈಗಾಗಲೇ ಐದಾರು ದಿನಗಳಿಂದ ಮುಷ್ಕರ ಮಾಡುತ್ತಿದ್ದರೂ ನೌಕರರ ಬೇಡಿಕೆ ಈಡೇರಿಸಲು ಸರ್ಕಾರವು ಹಿಂದೇಟು ಹಾಕುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಬೇಕು. ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು. ನಮ್ಮ ವಿವಿಧ 14 ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಮುಂದುವರಿಸಲು ಒಮ್ಮತದಿಂದ ತೀರ್ಮಾನಿಸಿದೆವು” ಎಂದು ಸಂಘದ ಸದಸ್ಯರು ತಿಳಿಸಿದರು.

 ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಾದ ಡಾ.ಗುರುಸ್ವಾಮಿ, ಮುನಿರತ್ನಮ್ಮ, ಶೋಭಾ, ಕೀರ್ತಿ, ಶ್ರೀನಿವಾಸ್, ಮಂಜುನಾಥ್, ಮನೋಹರ್, ನಾಗರಾಜ್, ನರಸಿಂಹಮೂರ್ತಿ, ಶಶಿಕುಮಾರ್, ಗಂಗಪ್ಪ, ಶಿವಪ್ಪ, ಬಾಲರಾಜು, ಮುನಿರತ್ನ, ಮಂಗಳಾ, ಪ್ರತಿಭಾ, ವಿಜಯಾ, ಮಮತಾ, ಚೈತ್ರಾ, ಭಾಗ್ಯಮ್ಮ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!