News

ಆರೋಗ್ಯವಂತ ತಾಯಿ ಮಕ್ಕಳನ್ನು ರೂಪಿಸಲು ಸರ್ಕಾರ ರಚಿಸಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು

mother child government program Sidlaghatta

ಶಿಡ್ಲಘಟ್ಟ ನಗರದ ಆಜಾದ್‌ನಗರದಲ್ಲಿ ಬುಧವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಮಾತೃವಂದನಾ ಯೋಜನಾ ಸಪ್ತಾಹ ಹಾಗು ಪೋಷಣ್ ಮಾಸಾಚರಣೆ 2021-22 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಭಾರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಹೇಶ್ ಮಾತನಾಡಿದರು.

ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಕಿಶೋರಿಯರು ಸೇರಿದಂತೆ ಮಕ್ಕಳನ್ನು ಆರೋಗ್ಯವಂತರನ್ನಾಗಿ ರೂಪಿಸುವ ಉದ್ದೇಶದಿಂದ ಇಲಾಖೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರ ಜಾರಿಗೆ ತಂದಿರುವ ಮಾತೃವಂದನಾ ಯೋಜನೆಯು ಬಾಣಂತಿಯರು ಸೇರಿದಂತೆ ಗರ್ಭಿಣಿಯರಿಗೆ ಸಹಕಾರಿಯಾಗಲಿದೆ. ಅರ್ಹ ಗರ್ಭಿಣಿ ಹಾಗು ಬಾಣಂತಿಯರಿಗೆ ಯೋಜನೆಯಡಿ ಮುರು ಹಂತದಲ್ಲಿ ೫ ಸಾವಿರ ನಗದು ಖಾತೆಗೆ ಜಮಾ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಬೆ ಉಪಾಧ್ಯಕ್ಷ ಅಪ್ಸರ್‌ಪಾಷ, ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭಾ, ಮುಖಂಡರಾದ ಎಸ್.ಎಂ.ರಮೇಶ್, ಬಾಬಾಜಾನ್, ಅಮೀರ್, ಪೋಷಣ್ ಅಭಿಯಾನದ ಸಿಬ್ಬಂದಿ ದೀಕ್ಷಾ, ರೋಜಾರಮಣಿ ಮತ್ತಿತರರು ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Horticulture Department Schemes Apply

News

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Sidlaghatta : 2026-27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಾದ ಹೊಸ ಪ್ರದೇಶ ವಿಸ್ತರಣೆ,(ದ್ರಾಕ್ಷಿ, ಬಾಳೆ, ಪಪ್ಪಾಯ, ಮಾವು, ದಾಳಿಂಬೆ, ಸೀಬೆ,…

Share
Karnataka Urge Pro Kannada Farmers Protest withdrawal

News

ರಾಜ್ಯ ಸರ್ಕಾರದ ಅಲ್ಪ ಸಂಖ್ಯಾತರ ಓಲೈಕೆ ಸರಿಯಲ್ಲ, ಕನ್ನಡ, ರೈತ ಪರ ಹೋರಾಟ ಪ್ರಕರಣಗಳನ್ನು ಹಿಂಪಡೆಯಬೇಕು

Sidlaghatta : ಕನ್ನಡಪರ ಮತ್ತು ರೈತ ಪರ ಹೋರಾಟಗಾರರ ವಿರುದ್ದ ರಾಜ್ಯದ ವಿವಿಧ ಕಡೆ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ…

Share
Varadanayakanahalli Govt Land Encroachment Protest

News

ವರದನಾಯಕಹಳ್ಳಿಯಲ್ಲಿನ ಗೋಮಾಳ ರಕ್ಷಣೆ ಮಾಡುವಂತೆ ಕೋರಿ ಪ್ರತಿಭಟನೆ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕಹಳ್ಳಿಯ ಗೋಮಾಳ ಜಮೀನಿನ ಒತ್ತುವರಿ ತೆರವುಗೊಳಿಸಿ ಗೋಮಾಳದಲ್ಲಿ ಜಾನುವಾರುಗಳನ್ನು ಮೇಯಿಸಲು ಬಿಡಲು ಕ್ರಮವಹಿಸುವಂತೆ ಆಗ್ರಹಿಸಿ ಗ್ರಾಮದ ಕಲಾವಿದ ಈಧರೆ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Sidlaghatta Land Surveyors halt work plea to govt

News

ಸರ್ಕಾರದ ವಿರುದ್ಧ ಪರವಾನಗಿ ಭೂಮಾಪಕರು: ರಾಜ್ಯಾದ್ಯಂತ ಭೂ-ದಾಖಲೆಗಳ ಕಾರ್ಯ ಸ್ತಬ್ಧ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಭೂಮಾಪಕರು ಶಾಸಕ ಬಿ. ಎನ್. ರವಿಕುಮಾರ್ ಅವರ ಗೃಹ ಕಚೇರಿಯಲ್ಲಿ ಬುಧವಾರ ಭೇಟಿ ನೀಡಿ ಅವರಿಗೆ ಮನವಿ ಪತ್ರ…

Share