Home News ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶಾಲೆಗಳ ಪ್ರಾರಂಭೋತ್ಸವ

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶಾಲೆಗಳ ಪ್ರಾರಂಭೋತ್ಸವ

0

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡದಾಸೇನಹಳ್ಳಿ (Doddadasenahalli) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 2022-23 ನೇ ಸಾಲಿನ “ಶಾಲಾ ಪ್ರಾರಂಭೋತ್ಸವ” (School Reopen) ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷಕರು ಮತ್ತು ಶಿಕ್ಷಕರು ಸೇರಿ ಆಚರಿಸಿದರು. ಶಿಕ್ಷಕರು ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ಹಂಚಿದರು. ಮಕ್ಕಳಿಗೆ ಶಾಲೆಯಲ್ಲಿ “ಸಿಹಿ ಪೊಂಗಲ್ “ಅನ್ನು ನೀಡಲಾಯಿತು.

ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿಯ (Varadanayakanahalli) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಶಾಲೆಯ ಆವರಣದಲ್ಲಿ ಬೆಳೆದ ಹೂಗಳಿಂದ ಪುಟ್ಟ ಹೂಗುಚ್ಛ ತಯಾರಿಸಿ ಮಕ್ಕಳನ್ನು ಶಿಕ್ಷಕರು ಸ್ವಾಗತಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ (Appegowdanahalli) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಮಕ್ಕಳಿಗೆ ಪುಸ್ತಕಗಳು, ಬೆಲೂನುಗಳು ಮತ್ತು ಸಿಹಿ ವಿತರಿಸಿ ಸ್ವಾಗತಿಸಲಾಯಿತು.

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು (Sugaturu) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಪ್ರಾರಂಭೋತ್ಸವ, ತಾಲ್ಲೂಕು ಮಟ್ಟದ ಬಿಸಿಯೂಟ ಮಧ್ಯಾಹ್ನ ಉಪಾಹಾರ ಯೋಜನೆ, ಪ್ರಧಾನಮಂತ್ರ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ಉದ್ಘಾಟನೆ, ಬುದ್ಧಪೂರ್ಣಿಮೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಆಂಗ್ಲಭಾಷಾ ವಿಷಯಪರಿವೀಕ್ಷಕಿ ಕೃಷ್ಣಕುಮಾರಿ ಪಾಲ್ಗೊಂಡು ಕಲಿಕಾಚೇತರಿಕೆಯಂತಹ ವಿಶಿಷ್ಟ ಉಪಕ್ರಮ ಬೋಧನಾ-ಕಲಿಕಾ ಕಾರ್ಯಕ್ರಮವನ್ನು ದೇಶದಲ್ಲಿಯೇ ಮೊದಲಬಾರಿಗೆ ರಾಜ್ಯದಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ಮಕ್ಕಳಲ್ಲಿ ಆಗಿರುವ ಕಲಿಕಾಕಂದಕವನ್ನು ಹೋಗಲಾಡಿಸಲು ಪೂರಕವಾಗಿದೆ ಎಂದು ತಿಳಿಸಿದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version