News

ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ

Sidlaghatta Government Hospital Oxygen Generator Chikkaballapur District Covid third Wave

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಹೊಸದಾಗಿ ನಿರ್ಮಾಣವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಪರಿಶೀಲಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮಾತನಾಡಿದರು.

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕವನ್ನು ಸಮರ್ಪಕವಾಗಿ ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿಯಿಂದ ನಾವು ಆಮ್ಲಜನಕವನ್ನು ತುಂಬಿಸಿ ತರಿಸುವ ಪ್ರಸಂಗ ಬಂದಿತ್ತು. ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆ ಮತ್ತು ಪ್ರತಿಯೊಂದು ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಒಂದೊಂದು ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿದೆ.

ಮೂರನೇ ಕೊರೊನಾ ಅಲೆ ಬಂದಿದ್ದೇ ಆದರೆ ಜಿಲ್ಲಾಡಳಿತ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ವಸನ್ನದ್ಧವಾಗಿದೆ. ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿ.ಎಸ್.ಆರ್ ಅನುದಾನದಲ್ಲೊಂದು ನಿಮಿಷಕ್ಕೆ 250 ಲೀಟರ್ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸಲಾಗಿದೆ. ಈ ಘಟಕದ ನಿರ್ಮಾಣ ಸಂಪೂರ್ಣ ಮುಗಿದಿದ್ದು, ಸಣ್ಣ ಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ ಎಂದು ಅವರು ತಿಳಿಸಿದರು.

ಕೊರೊನಾ ಮೂರನೇ ಅಲೆಯೇನಾದರೂ ಬಂದಿದ್ದೇ ಆದರೆ, ನಾವುಗಳ ತಾಲ್ಲೂಕು ಕೇಂದ್ರಗಳಲ್ಲಿಯೇ ಸೋಂಕಿತರಿಗೆ ಅದರಲ್ಲೂ ಆಮ್ಲಜನಕದ ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ವಶಕ್ತರಿದ್ದೇವೆ. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಆಮ್ಲಜನಕಯುಕ್ತ ಹಾಸಿಗೆಗಳುಳ್ಳ ಕೋವಿಡ್ ಕೇಂದ್ರಗಳನ್ನು ಮುಂಜಾಗ್ರತಾ ಕ್ರಮವಾಗಿ ಸಿದ್ಧರಿಸಿಕೊಂಡಿರುತ್ತೇವೆ ಎಂದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ 30 ಹಾಸಿಗೆಗಳ ಕೊಠಡಿಯನ್ನು ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿದ್ದೇವೆ. ಅದು ಕೂಡ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಲಾಗುತ್ತಿದ್ದು, ಅದರ ನಿರ್ಮಾಣದಲ್ಲಿ ಯುನೈಟೆಡ್ ವೇ ಎಂಬ ಸಂಸ್ಥೆಯು ಸಹಕಾರ ನೀಡುತ್ತಿದೆ. ಅದರಲ್ಲಿ 13 ಹಾಸಿಗೆಗಳ ಎರಡು ಸಾಮಾನ್ಯ ವಾರ್ಡ್ ಗಳು, 4 ಹಾಸಿಗೆಗಳ ಒಂದು ಐ.ಸಿ.ಯು ವಾರ್ಡ್ ಮತ್ತು ವೈದ್ಯರ ಕೋಣೆ ಸಹ ನಿರ್ಮಿಸಲಾಗುತ್ತಿದೆ. ಅದು ಕೂಡ ಮುಗಿಯುವ ಹಂತದಲ್ಲಿದೆ. ಒಟ್ಟಾರೆಯಾಗಿ ಗ್ರಾಮಾಂತರ ಪ್ರದೇಶದಲ್ಲಿಯೇ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಕಬಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಆರೋಗ್ಯ ನಿರೀಕ್ಷಕ ದೇವರಾಜ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ನಿಮ್ಮ ಊರಿನ ಸುದ್ದಿ ಇದೆಯೇ?
ಫೋಟೋ ಸಮೇತ WhatsApp ನಲ್ಲಿ ಕಳುಹಿಸಿ

Open WhatsApp

ಇದನ್ನೂ ಓದಿ

Sidlaghatta Govt Hospital Ayushman Bharat Health Card Awareness

News

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಜಾಥಾ

ಶಿಡ್ಲಘಟ್ಟ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಯೊಜನೆಯ ಕುರಿತಂತೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಡಾ.ವೆಂಕಟೇಶಮೂರ್ತಿ ಅವರು ಮಾತನಾಡಿದರು. ರಾಜ್ಯ…

Share

News

ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಭಟಿಸನೆ

ಶಿಡ್ಲಘಟ್ಟದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಸರ್ಕಾರಿ ಸೇವೆಗೆ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟಿಸಿದರು.…

Share

News

ವೈದ್ಯರಿಲ್ಲದೆ ಸರ್ಕಾರಿ ಆಸ್ಪತ್ರೆ, ರೋಗಿಗಳ ಪರದಾಟ

ವೈ.ಹುಣಸೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಆಸ್ಪತ್ರೆ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ತಾಲ್ಲೂಕಿನ ವೈ.ಹುಣಸೇನಹಳ್ಳಿಯಲ್ಲಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ

ತಾಲ್ಲೂಕಿನ ದಲಿತ ಸಂಘರ್ಷಸಮಿತಿ ಸದಸ್ಯರು ಶುಕ್ರವಾರ ದಲಿತ ಮುಖಂಡ ಎನ್.ಶಿವಣ್ಣ ಅವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್…

Share