Home News ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ

ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ

0
Sidlaghatta Government Hospital Oxygen Generator Chikkaballapur District Covid third Wave

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಹೊಸದಾಗಿ ನಿರ್ಮಾಣವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕವನ್ನು ಪರಿಶೀಲಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮಾತನಾಡಿದರು.

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕವನ್ನು ಸಮರ್ಪಕವಾಗಿ ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿಯಿಂದ ನಾವು ಆಮ್ಲಜನಕವನ್ನು ತುಂಬಿಸಿ ತರಿಸುವ ಪ್ರಸಂಗ ಬಂದಿತ್ತು. ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆ ಮತ್ತು ಪ್ರತಿಯೊಂದು ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಒಂದೊಂದು ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿದೆ.

ಮೂರನೇ ಕೊರೊನಾ ಅಲೆ ಬಂದಿದ್ದೇ ಆದರೆ ಜಿಲ್ಲಾಡಳಿತ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ವಸನ್ನದ್ಧವಾಗಿದೆ. ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿ.ಎಸ್.ಆರ್ ಅನುದಾನದಲ್ಲೊಂದು ನಿಮಿಷಕ್ಕೆ 250 ಲೀಟರ್ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸಲಾಗಿದೆ. ಈ ಘಟಕದ ನಿರ್ಮಾಣ ಸಂಪೂರ್ಣ ಮುಗಿದಿದ್ದು, ಸಣ್ಣ ಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ ಎಂದು ಅವರು ತಿಳಿಸಿದರು.

ಕೊರೊನಾ ಮೂರನೇ ಅಲೆಯೇನಾದರೂ ಬಂದಿದ್ದೇ ಆದರೆ, ನಾವುಗಳ ತಾಲ್ಲೂಕು ಕೇಂದ್ರಗಳಲ್ಲಿಯೇ ಸೋಂಕಿತರಿಗೆ ಅದರಲ್ಲೂ ಆಮ್ಲಜನಕದ ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ವಶಕ್ತರಿದ್ದೇವೆ. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಆಮ್ಲಜನಕಯುಕ್ತ ಹಾಸಿಗೆಗಳುಳ್ಳ ಕೋವಿಡ್ ಕೇಂದ್ರಗಳನ್ನು ಮುಂಜಾಗ್ರತಾ ಕ್ರಮವಾಗಿ ಸಿದ್ಧರಿಸಿಕೊಂಡಿರುತ್ತೇವೆ ಎಂದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ 30 ಹಾಸಿಗೆಗಳ ಕೊಠಡಿಯನ್ನು ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿದ್ದೇವೆ. ಅದು ಕೂಡ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಲಾಗುತ್ತಿದ್ದು, ಅದರ ನಿರ್ಮಾಣದಲ್ಲಿ ಯುನೈಟೆಡ್ ವೇ ಎಂಬ ಸಂಸ್ಥೆಯು ಸಹಕಾರ ನೀಡುತ್ತಿದೆ. ಅದರಲ್ಲಿ 13 ಹಾಸಿಗೆಗಳ ಎರಡು ಸಾಮಾನ್ಯ ವಾರ್ಡ್ ಗಳು, 4 ಹಾಸಿಗೆಗಳ ಒಂದು ಐ.ಸಿ.ಯು ವಾರ್ಡ್ ಮತ್ತು ವೈದ್ಯರ ಕೋಣೆ ಸಹ ನಿರ್ಮಿಸಲಾಗುತ್ತಿದೆ. ಅದು ಕೂಡ ಮುಗಿಯುವ ಹಂತದಲ್ಲಿದೆ. ಒಟ್ಟಾರೆಯಾಗಿ ಗ್ರಾಮಾಂತರ ಪ್ರದೇಶದಲ್ಲಿಯೇ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಕಬಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಆರೋಗ್ಯ ನಿರೀಕ್ಷಕ ದೇವರಾಜ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version