Sidlaghatta : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ ಮತ್ತು ವಸತಿ ಶಾಲೆಗಳಿಗೆ ಸರಬರಾಜು ಮಾಡಬೇಕಿದ್ದ ಗೋಧಿ ಈಗ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಎಚ್. ಕ್ರಾಸ್ ಜಂಗಮಕೋಟೆ ಮಾರ್ಗದ ಮೂಲಕ ಹೊಸಕೋಟೆಗೆ ತೆರಳುತ್ತಿದ್ದ ವೇಳೆಯಲ್ಲಿ ಶಿಡ್ಲಘಟ್ಟ ಗ್ರಾಮಂತರ ಪೊಲೀಸ್ ಠಾಣೆ ಪಿ.ಎಸ್.ಐ ಸುನಿಲ್ ಮತ್ತು ಸಿಬ್ಬಂದಿ ಜಂಗಮಕೋಟೆ ಕ್ರಾಸ್ ನಲ್ಲಿ ಸುಮಾರು 14 ಟನ್ 250ಕ್ಕೂ ಅಧಿಕ ಗೋಧಿ ಚೀಲಗಳನ್ನು ಹಾಗೂ ಕ್ಯಾಂಟರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಶಿಡ್ಲಘಟ್ಟ ಗ್ರಾಮಂತರ ಪೊಲೀಸರು ಆಹಾರ ಇಲಾಖೆಯ ನಿರೀಕ್ಷಕಿ ವೆಂಕಟ ಲಕ್ಷ್ಮಿ ಮತ್ತು ಸಿಬ್ಬಂದಿಯವರ ಸಮ್ಮುಖದಲ್ಲಿ ಅಕ್ರಮವಾಗಿ ಸರಬರಾಜು ಆಗುತ್ತಿದ್ದ ಗೋಧಿ ದಾಸ್ತಾನು ಕುರಿತು ಮಹಜರ ನಡೆಸಿದರು.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.








